ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ
BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ ಹಾಗೂ ಮನೋಹರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿ.ಕೆ.ರವಿರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಬೈಪಾಸ್ ರಸ್ತೆಗೆ ವಿರೋಧ, ರೈತರ ಪ್ರತಿಭಟನೆ
SHIKARIPURA : ಬೈಂದೂರು– ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ (bypass road)ನಿರ್ಮಾಣ ವಿರೋಧಿಸಿ ಚನ್ನಳ್ಳಿ, ನೆಲವಾಗಿಲು, ಗಬ್ಬೂರು, ಹಳಿಯೂರು, ಸದಾಶಿವಪುರ ಗ್ರಾಮದ ರೈತರು ಕೃಷಿಭೂಮಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬೈಪಾಸ್ ರಸ್ತೆ ನಿರ್ಮಾಣಕ್ಕೆ ನೀರಾವರಿ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಬೈಪಾಸ್ ರಸ್ತೆ ನಿರ್ಮಾಣ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರಬೇಕು. ಪಟ್ಟಣ ಸಮೀಪದ ಕೇವಲ 1 ಕೀ.ಮಿ. ವ್ಯಾಪ್ತಿಯಲ್ಲಿ ಬೈಪಾಸ್ ರಸ್ತೆ ನಿರ್ಮಿಸುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ವಿಜಯೇಂದ್ರ ಮೆರವಣಿಗೆ, ಹೇಗಿತ್ತು ಬೈಕ್ ಜಾಥಾ?
ಟ್ರಾಕ್ಟರ್ ಪಲ್ಟಿ, ಓರ್ವ ಸಾವು
KONANDURU : ಟ್ರಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಾಯವಾಗಿದೆ. ಅಡಿಕೆ ಗೊನೆ ತೆಗೆಯಲು ತೋಟಕ್ಕೆ ತೆರಳಿದ್ದ ಬಾವಿಕೈ ಸರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲಿನ ಮನೆಯ ನರಸಿಂಹ (50) ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ನಲ್ಲಿ ಇದ್ದ ಇನ್ನೂ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422