ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ನಾಳೆಯೂ ಮುಂದುವರೆಯುತ್ತಾ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 20 OCTOBER 2024 : ಭಾರಿ ಮಳೆ ಹಿನ್ನೆಲೆ ಹವಾಮಾನ ಇಲಾಖೆ ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ (Orange Alert) ಪ್ರಕಟಿಸಿದೆ. ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆ ಸಂಜೆ ವೇಳೆಗೆ ಪುನಃ ಅಬ್ಬರಿಸಿದೆ. ಇವತ್ತು ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಆಕ್ಯು ವೆದರ್‌.ಕಾಂ ವರದಿ ಮಾಡಿದೆ. ಇನ್ನೊಂದೆಡೆ ದಟ್ಟ ಮೋಡ ಮತ್ತು ಗುಡುಗು ಮುಂದುವರೆದಿದ್ದು ರಾತ್ರಿ ಜೋರು ಮಳೆಯಾಗುವ ಮುನ್ಸೂಚನೆ ಇದೆ.

rain-at-shankaramutt-road-in-Shimoga-city

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಮಳೆ ಆರಂಭ, ಜನರಲ್ಲಿ ಆತಂಕ

ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರವು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment