ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ (Vandalized) ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದ್ಭಾವನಾ ಯಾತ್ರೆ (Padayathre) ನಡೆಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಾಂಧಿ ಪಾರ್ಕ್ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ಅವರು ಸದ್ಭಾವನಾ ಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಮಹಾತ್ಮ ಗಾಂಧೀಜಿ ಪತ್ರಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಿಂದ ಹೊಳೆಹೊನ್ನೂರಿನವರೆಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಾದಯಾತ್ರೆ ನಡೆಸಲಾಯಿತು.
ಇದೆ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ‘ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಹಾನಿಗೊಳಿಸಿದವರು ದುಷ್ಟರು. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಗಾಂಧೀಜಿ ಅವರ ಆದರ್ಶಗಳು ಅನಕರಣೀಯ. 1927ರಲ್ಲಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು ಎಂಬುದು ಹೆಮ್ಮೆಯ ಸಂಗತಿ. ಶಿಕಾರಿಪುರದ ಈಸೂರು ಹೋರಾಟಕ್ಕೆ ಅವರು ಪ್ರೇರಣೆಯಾಗಿದ್ದರು’ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹರಿಕೃಷ್ಣ, ಪ್ರಮುಖರಾದ ಕೆ.ವಿ.ಅಣ್ಣಪ್ಪ ಸೇರಿದಂತೆ ಹಲವರು ಇದ್ದರು.