ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ಶಿವಮೊಗ್ಗ ಮಹಾನಗರ ಪಾಲಿಕೆಗೆ ಗೊತ್ತಿಲ್ಲದೆ ಪಾಲಿಕೆ ಆವರಣದಲ್ಲಿ ಕೋಟಿ ಕೋಟಿಯ (CRORE RUPEES) ಕಾಮಗಾರಿ ನಡೆಯುತ್ತಿದೆ. ಈ ಕುರಿತು ಮಾಹಿತಿ ಹಕ್ಕು ಅಧಿನಿಯಮದ ಅಡಿ ಮಾಹಿತಿ ಕೇಳಿದಾಗ. ತನಗೇನು ಗೊತ್ತಿಲ್ಲ ಎಂದು ಪಾಲಿಕೆ ಆಡಳಿತ ನುಣುಚಿಕೊಂಡಿದೆ. ಈ ನಡುವೆ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಪಾಲಿಕೆ ಆವರಣದಲ್ಲಿ 4.60 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಗೆ ಕಾರಣವೇನು? (CRORE RUPEES)
ಮಹಾನಗರ ಪಾಲಿಕೆ ಪ್ರವೇಶ ದ್ವಾರದಿಂದ ಇದ್ದ ಡಾಂಬರ್ ರಸ್ತೆಯನ್ನು ಕಿತ್ತು ಹಾಕಲಾಗಿದೆ. ಅಲ್ಲಿ ಕಲ್ಲು ಹಾಸಿನ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಈ ಕಾಮಗಾರಿ ಕುರಿತು ಸ್ಮಾರ್ಟ್ ಸಿಟಿ ಸಂಸ್ಥೆಯು ಪಾಲಿಕೆ ಸಭೆಯ ಅನುಮತಿ ಪಡೆದಿಲ್ಲ. 4.60 ಕೋಟಿ ರೂ. (CRORE RUPEES) ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಲು ಹಾಸಿನ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಆರೋಪಿಸಿದೆ.
ಓಡಾಟ, ವಾಹನ ಸಂಚಾರ ಕಷ್ಟ (CRORE RUPEES)
ಪಾಲಿಕೆ ಗೇಟ್ ನಿಂದ ಮುಖ್ಯ ಕಟ್ಟಡದವರೆಗೆ ಕಲ್ಲು ಹಾಸಿನ ರಸ್ತೆ ನಿರ್ಮಾಣ ಮಾಡಲಾಗಿದೆ. ಇದರ ಮೇಲೆ ಓಡಾಡುವುದು ಮತ್ತು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವುದು ಸುಲಭವಲ್ಲ. ಸೈಕಲ್ ಸವಾರರ ಪಾಲಿಗಂತೂ ಕಲ್ಲು ಹಾಸಿನ ರಸ್ತೆ ಸೂಕ್ತವಲ್ಲ ಎಂದು ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಮುಖಂಡರು ಆರೋಪಿಸಿದ್ದಾರೆ. ಕಲ್ಲು ಹಾಸಿನ ರಸ್ತೆ ಬದಲು ಪೇವರ್ಸ್ ಅಥವಾ ಟೈಲ್ಸ್ ಹಾಕಿ ಕಾಮಗಾರಿ ನಡೆಸುವಂತೆ ಆಗ್ರಹಿಸಿದ್ದಾರೆ. ಇನ್ನು ಕಲ್ಲು ಹಾಸಿನ ರಸ್ತೆಯ ಕೆಳಗೆ ಭೂಗತ ಕೇಬಲ್, ಚರಂಡಿಗೆ ಜಾಗವನ್ನೆ ಬಿಟ್ಟಿಲ್ಲ. ಹಾಗಾಗಿ ಇದು ಅವೈಜ್ಞಾನಿಕ ಮತ್ತು ಭ್ರಷ್ಟಾಚಾರದಿಂದ ಕೂಡಿರುವ ಕಾಮಗಾರಿಯಾಗಿದೆ ಎಂದು ಆರೋಪಿಸಲಾಗಿದೆ.
ಪಾಲಿಕೆಯ ಅನುಮತಿಯನ್ನೇ ಪಡೆದಿಲ್ಲ
ಮಹಾನಗರ ಪಾಲಿಕೆ ಆವರಣದಲ್ಲಿ ಕಾಮಗಾರಿ ನಡೆಸಲಾಗಿದೆ. ಆದರೆ ಈ ಕುರಿತು ಪಾಲಿಕೆಯಿಂದ ಅನುಮತಿ ಪಡೆದಿಲ್ಲ. ರಸ್ತೆ ಕಾಮಗಾರಿ ಕುರಿತು ಮಹಾನಗರ ಪಾಲಿಕೆಯಿಂದ ಪೂರ್ವನುಮತಿ ಪಡೆಯಬೇಕಿತ್ತು. ಜನಪ್ರತಿನಿಧಿಗಳ ಗಮನಕ್ಕಾದರೂ ತರಬೇಕಿತ್ತು. ಆದರೆ ಪಾಲಿಕೆಗೆ ಕೋರಿಕೆ ಸಲ್ಲಿಸದೆ, ಅಂದಾಜು ಪಟ್ಟಿಯನ್ನು ಒದಗಿಸಿ ಅನುಮೋದನೆಯನ್ನೂ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ. ಈ ಮೂಲಕ ಸ್ಮಾರ್ಟ್ ಸಿಟಿ ಯೋಜನೆಯ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.
‘ತನಗೇನೂ ಗೊತ್ತಿಲ್ಲ’ ಅಂತಿದೆ ಪಾಲಿಕೆ
ಪಾಲಿಕೆಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಸುತ್ತಲು ನಡೆಯುತ್ತಿರುವ ನವೀಕರಣ ಕಾಮಗಾರಿಯ ಬಗ್ಗೆ ಶಿವಮೊಗ್ಗದ ಸೀತರಾಮ ಎಂಬುವವರು ಮಾಹಿತಿ ಹಕ್ಕು ಅಡಿ ಮಾಹಿತಿ ಕೇಳಿದ್ದರು. ಅದರಲ್ಲಿ, ‘ಈ ಕಾಮಗಾರಿಗಾಗಿ ಸ್ಮಾರ್ಟ್ ಸಿಟಿ ವತಿಯಿಂದ ಯಾವುದೆ ಮನವಿ ಮಾಡಿರಲಿಲ್ಲ. ಕಾಮಗಾರಿ ಕುರಿತು ಅನುಮತಿ ಪಡೆದಿಲ್ಲ ಮತ್ತು ಕಾಮಗಾರಿ ವೆಚ್ಚದ ಕುರಿತು ತಮ್ಮ ಬಳಿ ಮಾಹಿತಿ ಇಲ್ಲ’ ಎಂದು ತಿಳಿಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತ ಅನುಮಾನ ವ್ಯಕ್ತವಾಗಿದೆ. ಅಲ್ಲದೆ ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ನಾಗರಿಕ ಹಿತರಕ್ಷಣಾ ವೇದಿಕೆ ಆರೋಪಿಸಿದೆ. ಅಲ್ಲದೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಸೊರಬದ ತಿಮ್ಮಪ್ಪನಿಗೆ 20 ವರ್ಷ ಜೈಲು, 1.44 ಲಕ್ಷ ದಂಡ, ಈತನ ಅಪರಾಧವೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422