ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಕರ್ತವ್ಯ ನಿರ್ವಹಿಸುತ್ತಿದ್ದಾಗಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಅವರ ಕುಟುಂಬದವರು ಆಕ್ರಂದನ ಮುಗಿಲು ಮುಟ್ಟಿದೆ.
ಪಾಲಿಕೆಯ ಜನನ – ಮರಣ ವಿಭಾಗದಲ್ಲಿ ಇನ್ಸ್’ಪೆಕ್ಟರ್ ಆಗಿದ್ದ ಮೋಹಿದ್ದೀನ್ (42) ಮೃತರು. ಕರ್ತವ್ಯದಲ್ಲಿದ್ದ ಸಂದರ್ಭ ಮೋಹಿದ್ದೀನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಹೊತ್ತಿಗಾಗಲೇ ಮೋಹಿದ್ದೀನ್ ಕೊನೆಯುಸಿರೆಳೆದಿದ್ದಾರೆ.
ಇನ್ನು, ವಿಚಾರ ತಿಳಿದು ಮೋಹಿದ್ದೀನ್ ಕುಟುಂಬದವರು ಆಸ್ಪತ್ರೆಗೆ ದೌಡಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422