ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತಗಟ್ಟೆ ತೆರೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿ, ಮತದಾರರು ಮತ್ತು ಸಹಾಯಕರನ್ನು ಮಾತ್ರ ಪಾಲಿಕೆ ಗೇಟ್ ಒಳಗೆ ಬಿಡಲಾಗುತ್ತಿದೆ.
ಗೇಟ್ ಬಂದ್, ಸಿಬ್ಬಂದಿ ನಿಯೋಜನೆ
ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಮಹಾನಗರ ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಮತದಾರರನ್ನು ಗುರುತಿಸಿ ಗೇಟಿನ ಒಳಗೆ ಬಿಡಲಾಗುತ್ತಿದೆ. ಉಳಿದವರನ್ನು ಪಾಲಿಕೆ ಸಿಬ್ಬಂದಿ ಗೇಟ್ ಒಳಗೆ ಬಿಡುತ್ತಿಲ್ಲ.
ಈ ಬಗ್ಗೆ ಮಹಾನಗರ ಪಾಲಿಕೆ ಕಮಿಷನರ್ ಅವರು ಮುಂಚಿತವಾಗಿಯೇ ಮಾಹಿತಿ ನೀಡಿದ್ದರು. ಆದರೆ ಈ ಬಗ್ಗೆ ಮಾಹಿತಿ ಇರದೆ ಕೆಲವರು ಪಾಲಿಕೆ ಗೇಟ್ ಬಳಿಗೆ ಬಂದಿದ್ದರು. ಅವರಿಗೆ ಚುನಾವಣೆ ವಿಚಾರ ತಿಳಿಸಿ ಕಳುಹಿಸಲಾಯಿತು.
ಎಷ್ಟು ಮತದಾರರಿದ್ದಾರೆ ಇಲ್ಲಿ?
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 45 ಮತದಾರರು ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಶಾಸಕರು, ಮಹಾನಗರ ಪಾಲಿಕೆ ಸದಸ್ಯರು ಇಲ್ಲಿ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






