ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020
ಕರೋನ ಸೋಂಕಿಗೆ ತುತ್ತಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಅಂತ್ಯ ಸಂಸ್ಕಾರವನ್ನು ರೋಟರಿ ಚಿತಾಗಾರದಲ್ಲಿ ನಡೆಸಲಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಚಿತಾಗಾರದ ಬಳಿ ಇರುವ ಸ್ಲಂಗೆ ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು ಎಂದು ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಕಾರ್ಪೊರೇಟರ್‍ಗಳು, ಚಿತಾಗಾರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರೊಬ್ಬರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಈ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಚಿತಾಗಾರಕ್ಕೆ ಹೋಗುವ ದಾರಿಯಲ್ಲಿ ಬೇಲಿ ಹಾಕಿದ್ದಾರೆ.
ಹಾಗಾಗಿ ಕೂಡಲೆ ಚಿತಾಗಾರದ ಬಳಿ ಇರುವ ಸ್ಲಮ್‍ನಲ್ಲಿ ಸ್ಯಾನಿಟೈಸ್ ಮಾಡಬೇಕು, ಅಲ್ಲಿನ ನಿವಾಸಿಗಳಲ್ಲಿ ಜಿಲ್ಲಾಡಳಿತ ಭರವಸೆ ಮೂಡಿಸಬೇಕು ಎಂದು ಕಾರ್ಪೊರೇಟರ್‍ಗಳು ಒತ್ತಾಯಿಸಿದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್‍ಗಳಾದ ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]