ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಡಿಸೆಂಬರ್ 10ರಂದು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಡಿ.10ರಂದು ಮತದಾನ ನಡೆಯುವುದರಿಂದ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಆ ದಿನ ಮಹಾನಗರ ಪಾಲಿಕೆಯಲ್ಲಿ ಯಾವುದೆ ಕಚೇರಿ ಕೆಲಸಗಳು ನಡೆಯುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.