ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾಕ್ ಡೌನ್ ಮುಗಿಯುತ್ತಿದ್ದಂತೆ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ವ್ಯಾಪಾರ, ವಹಿವಾಟು ನಡುವೆ ಕರೋನವನ್ನೆ ಮರೆತಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಹಾಕಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ವ್ಯಾಪಾರ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಅವರೆ ಫೀಲ್ಡಿಗಿಳಿದು ಕೋವಿಡ್ ನಿಯಮ ಉಲ್ಲಂಘಿಸಿದ ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರಿಗೆ ದಂಡ ಹಾಕಿಸಿದ್ದಾರೆ.
ವ್ಯಾಪಾರಿಗಳು, ಜನರ ಆಕ್ರೋಶ
ಮಹಾನಗರ ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಅಧಿಕಾರಿಗಳದ್ದು ಏಕ ಪಕ್ಷೀಯ ನಿರ್ಧಾರ ಎಂದು ಸಿಟ್ಟಾದರು.
ರಾಜಕಾರಣಿಗಳ ಕಾರ್ಯಕ್ರಮದ ವೇಳೆ ಕೋವಿಡ್ ನಿಯಮ ಉಲ್ಲಂಘಿಸುವುದನ್ನು ಕಣ್ಣಾರೆ ಕಂಡರೂ ಅಧಿಕಾರಿಗಳು ಕ್ಯಾರೆ ಅನ್ನುವುದಿಲ್ಲ. ದಂಡದ ವಿಚಾರದ ಬಂದಾಗ ಜನರ ಮೇಲಷ್ಟೆ ಬರೆ ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200