ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್‌ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 4 JANUARY 2024

ಶಿವಮೊಗ್ಗ : ಪೌರ ಕಾರ್ಮಿಕನ ಆತ್ಮಹತ್ಯೆ ಯತ್ನ ಪ್ರಕರಣದಿಂದ ಆಕ್ರೋಶಗೊಂಡ ಮಹಾನಗರ ಪಾಲಿಕೆ (Palike) ಸಿಬ್ಬಂದಿ ತಮ್ಮ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಪಾಲಿಕೆ ಗೇಟ್‌ ಬಂದ್‌ ಮಾಡಿ ಹೋರಾಟ ನಡೆಸಿದರು.

ಪೌರ ಕಾರ್ಮಿಕ ಮೂರ್ತಿ ವಿಷ ಸೇವಿಸುವುದಾಗಿ ಸೆಲ್ಫಿ ವಿಡಿಯೋ ಮಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಸಂಜೆ ಹೊತ್ತಿಗೆ ಉಂಬ್ಳೆಬೈಲು ಸಮೀಪ ಮೂರ್ತಿ ಅವರನ್ನು ಪತ್ತೆ ಮಾಡಲಾಗಿತ್ತು. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Protest at Mahanagara Palike in Shimoga

ಪಾಲಿಕೆ ಬಂದ್‌ ಮಾಡಿ ಪ್ರತಿಭಟನೆ

ಮೂರ್ತಿ ಆತ್ಮಹತ್ಯೆಗೆ ಯತ್ನಿಸಲು ಮಾಜಿ ಕಾರ್ಪೊರೇಟರ್‌ ಪ್ರಭಾಕರ್‌ ಕಿರುಕುಳವೆ ಕಾರಣ ಎಂದು ಆರೋಪಿ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಪಾಲಿಕೆ ನೌಕರರು, ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.

Protest at Mahanagara Palike in Shimoga

ಮಾಜಿ ಕಾರ್ಪೊರೇಟರ್‌ ಪ್ರಭಾಕರ್‌ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡದ ಪ್ರಕರಣ ದಾಖಲಿಸಬೇಕು. ಅವರನ್ನು ತಕ್ಷಣ ಬಂಧಿಸಬೇಕು. ಅಲ್ಲಿಯವರೆಗೆ ಪ್ರತಿಭಟನೆ ನಡೆಯಲಿದೆ. ಶಾಸಕ‌ ಎಸ್.ಎನ್.ಚನ್ನಬಸಪ್ಪ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಈಗಲೂ ಹಾಲಿ ಕಾರ್ಪೋರೇಟರ್ ಎನ್ನುವ ಮನೋಭಾವದಿಂದ ಪ್ರಭಾಕರ್‌ ನಡೆದುಕೊಂಡಿದ್ದಾರೆ.

– ಎನ್.ಗೋವಿಂದ, ಪೌರ ಕಾರ್ಮಿಕರ ಸಂಘದ ಜಿಲಾಧ್ಯಕ್ಷ

RED-LINE-

ಮಹಾನಗರ ಪಾಲಿಕೆಯ ಲೋಡರ್ಸ್‌, ಕ್ಲೀನರ್‌ಗಳು, ಆರ್‌.ಒ ಸೆಕ್ಷನ್‌ ಸಿಬ್ಬಂದಿ ಸೇರಿದಂತೆ ನೌಕರರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪಾಲಿಕೆ ಸಂಪೂರ್ಣ ಸ್ಥಬ್ಧ

ಪಾಲಿಕೆಯ ಗೇಟ್‌ ಬಂದ್‌ ಮಾಡಿ ನೌಕರರು ಮತ್ತು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಕೆಲಸಗಳು ಸ್ಥಗಿತಗೊಂಡಿದ್ದವು. ಎಲ್ಲ ವಿಭಾಗಗಳ ಬಾಗಿಲು ಬಂದ್‌ ಮಾಡಲಾಗಿತ್ತು. ಪಾಲಿಕೆ ಆವರಣದೊಳಗೆ ಬೆರಳೆಣಿಕೆಯಷ್ಟು ಜನರ ಮಾತ್ರ ಇದ್ದರು.

Protest at Mahanagara Palike in Shimoga

ಇನ್ನು, ವಿವಿಧ ಕೆಲಸಗಳಿಗೆ ಪಾಲಿಕೆ ಆಗಮಿಸಿದ್ದ ಜನರು, ಪ್ರತಿಭಟನೆ ಹಿನ್ನೆಲೆ ಬರಿಗೈಲಿ ಹೊರ ನಡೆಯುವಂತಾಯಿತು.‌

Protest at Mahanagara Palike in Shimoga

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ, ಸುದ್ದಿಗೋಷ್ಠಿಯಲ್ಲಿ 3 ಪ್ರಮುಖ ಪಾಯಿಂಟ್‌ ಪ್ರಸ್ತಾಪ, ಏನೇನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment