ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2021
ಕಾಂಗ್ರೆಸ್ ಪಕ್ಷದಲ್ಲಿ ಪಂಚ ಕೌರವರಿದ್ದಾರೆ. ಜಾತಿಗೊಬ್ಬೊಬ್ಬರು ಮುಖ್ಯಮಂತ್ರಿ ರೇಸ್‍ನಲ್ಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಇವತ್ತು ನಡೆದ ಕಾರ್ಯಕರಿಣಿ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಸರ್ಕಾರ ಇರುವಾಗಲೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಡಿದಾಟ ನಡೆಯುತ್ತಿದೆ ಎಂದು ಆರೋಪಿಸಿದರು.
ಸಮಾಜವಾದ, ಸಾಮಾಜಿಕ ನ್ಯಾಯದ ವಿಚಾರವನ್ನು ಸಿದ್ದರಾಮಯ್ಯ ಅವರು ಬಾಯಿ ಮಾತಿಗಷ್ಟೆ ಹೇಳುತ್ತಾರೆ. ಅವರು ಕೂಡ ಸಿಎಂ ರೇಸ್‍ನಲ್ಲಿದ್ದಾರೆ. ವ್ಯಕ್ತಿ ಪೂಜೆ ಮಾಡಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಹೇಳುತ್ತಾರೆ. ಆದರೆ ಚಾಮರಾಜನಗರದ ಕಾರ್ಯಕರ್ತರಿಂದ ತಾವೆ ಮುಂದಿನ ಸಿಎಂ ಎಂದು ಘೋಷಣೆ ಕೂಗಿಸಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು
ದಲಿತ ಸಿಎಂ ಎಂದು ಡಾ.ಜಿ.ಪರಮೇಶ್ವರ್, ಅಲ್ಪಸಂಖ್ಯಾತ ಸಿಎಂ ಎಂದು ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬೊಬ್ಬರು ಸಿಎಂ ರೇಸ್‍ನಲ್ಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಸಂಘಟನೆ ವಿಚಾರದ ಮಹತ್ವದ ಚರ್ಚೆ
ಬಿಜೆಪಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ, ಪ್ರಮುಖ ಕಾರ್ಯಕ್ರಮಗಳಲ್ಲಿ ಚರ್ಚೆ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಕಾರ್ಯಕಾರಣಿಯಲ್ಲಿ ಪಾಲ್ಗೊಂಡಿದ್ದರು.
ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ಇಲ್ಲಿದೆ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200