ಸರ್ಕಾರಕ್ಕೆ ಇವತ್ತು ರಾತ್ರಿ 12 ಗಂಟೆವರೆಗೂ ಗಡುವು ನೀಡಿದ ಸ್ವಾಮೀಜಿ

 SHIVAMOGGA LIVE NEWS 

ಶಿವಮೊಗ್ಗ | ಪಂಚಮಸಾಲಿ (PANCHAMASALI) ಲಿಂಗಾಯತರಿಗೆ (LINGAYATH) ಸರ್ಕಾರ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸಬೇಕು. ಇವತ್ತು ಮಧ್ಯರಾತ್ರಿವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವ ಜಯಮೃತ್ಯುಂಜಯ (BASAVA JAYAMRUTYUNJAYA SWAMIJI) ಸ್ವಾಮೀಜಿ ಅವರು, ಪಂಚಮಸಾಲಿ ಲಿಂಗಾಯಿತರಿಗೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಯಡಿಯೂರಪ್ಪ (YEDYURAPPA) ಅವರು ಭರವಸೆ ನೀಡಿದ್ದರು. ಆದರೆ ಅಷ್ಟರಲ್ಲಿ ಅವರು ಅಧಿಕಾರ ಕಳದುಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVARAJA BOMMAI) ಅವರು ಎರಡು ತಿಂಗಳು ಸಮಯ ಕೇಳಿದ್ದರು. ಈ ಅವಧಿ ಮುಗಿದಿದೆ. ಇಂದು ಮಧ್ಯರಾತ್ರಿ 12 ಗಂಟೆವರೆಗೂ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಎರಡು ತಿಂಗಳು ಗಡುವು ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಳಿದ್ದರು. ಈಗ ತಾವು ಗಡುವು ನೀಡಿಲ್ಲ ಎಂದು ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಈ ರೀತಿ ಗೊಂದಲ ಸೃಷ್ಟಿ ಮಾಡುವುದು ತಪ್ಪು.ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಶಿವಮೊಗ್ಗದಲ್ಲಿ ಜ್ಞಾಪನ ಪತ್ರ ಚಳವಳಿ

ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ (RESERVATION) ನೀಡುವಂತೆ ಒತ್ತಾಯಿಸಿ ಮತ್ತೆ ಚಳವಳಿ ನಡೆಸಲಾಗುತ್ತಿದೆ. ಆಗಸ್ಟ್ 23ರಂದು ಶಿಗ್ಗಾವಿಯಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆಯಲ್ಲಿ ಮಾತನಾಡಲಿದ್ದಾರೆ. ಪಂಚಮಸಾಲಿ ಲಿಂಗಾಯಿತರಿಗೆ ಮೀಸಲಾತಿ ನೀಡದಿರಲು ಕಾರಣವೇನು? ಯಾರು ಇದಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಲಿದ್ದಾರೆ ಎಂದು  ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಇನ್ನು, ಆಗಸ್ಟ್ 25ರಂದು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಯಡಿಯೂರಪ್ಪ ಅವರಿಗೆ ಜ್ಞಾಪನ ಪತ್ರ ನೀಡಲಾಗುತ್ತದೆ. ಆ ದಿನ ದೊಡ್ಡ ಸಂಖ್ಯೆಯಲ್ಲಿ ಪಂಚಮಸಾಲಿ ಲಿಂಗಾಯತರು ಸೇರಬೇಕು. ಯಡಿಯೂರಪ್ಪ ಅವರು ಬಂದರೆ ಅಲ್ಲಿಯೇ ಅವರಿಗೆ ಜ್ಞಾಪನ ಪತ್ರ ನೀಡುತ್ತೇವೆ. ಇಲ್ಲವಾದಲ್ಲಿ ಅವರ ಮನೆಗೆ ತೆರಳಿ ಜ್ಞಾಪನ ಪತ್ರ ನೀಡಲಿದ್ದೇವೆ ಎಂದು ತಿಳಿಸಿದರು.

ಸಿಎಂ ಕೈಯ್ಯಲ್ಲಿ ಸುಪ್ರೀಂ ಅಧಿಕಾರ

ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ತಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೂಡ ಬೆಂಬಲ ಘೋಷಿಸಿದ್ದಾರೆ. ಆದರೆ ಎರಡು ಪಕ್ಷಗಳು ಅಧಿಕೃತವಾಗಿ ಬೆಂಬಲ ಘೋಷಿಸಿಲ್ಲ. ಬಿಜೆಪಿ ಬೆಂಬಲ ಘೋಷಿಸಿದೆ. ಎಂಟು ವರ್ಷವಾದರೂ ಮೀಸಲಾತಿ ಸಿಕ್ಕಿಲ್ಲ. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಯಲ್ಲಿ ಸುಪ್ರೀಂ ಅಧಿಕಾರವಿದೆ. ಅವರು ವಿಳಂಬ ಮಾಡಬಾರದು ಎಂದು ಸ್ವಾಮೀಜಿ ತಿಳಿಸಿದರು.

ಮನೆ ಮನೆ ಪ್ರಚಾರ ಮಾಡುತ್ತೇವೆ

ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ (HAKRE MALLIKARJUNA) ಅವರು ಮಾತನಾಡಿ, ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಡಿಯೂರಪ್ಪ ಅವರು ಧ್ವನಿ ಎತ್ತಬೇಕಿದೆ. ಅವರು ಮಾತನಾಡಿದರೆ ಪಂಚಮಸಾಲಿ ಲಿಂಗಾಯತರು ಮತ್ತು ಇತರೆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಸಿಗಲಿದೆ. ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ತಿಂಗಳು ಮನೆ ಮನೆ ಪ್ರಚಾರ ಮಾಡಲಿದ್ದೇವೆ. ಸಾಮಾಜಿಕ ನ್ಯಾಯ ಸಿಗದಿರಲು ಕಾರಣ ಯಾರು ಅನ್ನುವುದನ್ನು ಶ್ರೀಗಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪಂಚಮಸಾಲಿ ಲಿಂಗಾಯತ ಸಮಾಜದ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Shimoga Mythri Jewels

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆ್ಯಂಟಿಕ್ ಚಿನ್ನದ ಉತ್ಸವ, ಮಹಿಳೆಯರ ಗಮನ ಸೆಳೆಯುತ್ತಿವೆ ವೆರೈಟಿ ಆಭರಣ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 22, 2022 at 2:58 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 22, 2022

Leave a Comment