ಶಿವಮೊಗ್ಗದಲ್ಲಿ ಅರೆಸೇನಾ ಮಾಜಿ ಯೋಧರ ಪ್ರತಿಭಟನೆ, ಸೌಲಭ್ಯಕ್ಕಾಗಿ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 NOVEMBER 2022

SHIMOGA | ಅರೆ ಸೇನಾ ಪಡೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ಸರ್ಕಾರದ ಸವಲತ್ತು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಅರೆಸೇನಾ (para military) ಮಾಜಿ ಸೈನಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Shimoga Nanjappa Hospital

ಗಡಿ ಭದ್ರತಾ ಪಡೆ, ಕೇಂದ್ರಿಯ ಮೀಸಲು ಪೊಲೀಸ್ ಪಡೆ, ಕೇಂದ್ರಿಯ ಔದ್ಯೋಗಿಕ ಸುರಕ್ಷಾ ಪಡೆ, ಇಂಡೋ ಟಿಬೇಟಿಯನ್ ಗಡಿ ಭದ್ರತಾ ಪಡೆ, ಸಶಸ್ತ್ರ ಸೀಮಾ ಪಡೆ, ಅಸ್ಸಾಮ್ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದರೆಗೆ ಸರ್ಕಾರದ ಸವಲತ್ತು ಸಿಗುತ್ತಿಲ್ಲ. ಭಾರತೀಯ ಸೇನೆಯ ಯೋಧರಂತೆ ಅರೆ ಸೇನಾಪಡೆಯ (para military) ಯೋಧರು ಕೂಡ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ನಿವೃತ್ತಿಯ ಬಳಿಕ ಸೇನೆಯ ಮಾಜಿ ಯೋಧರಿಗೆ ಸಿಗುವ ಸೌಲಭ್ಯ ತಮಗು ಸಿಗಬೇಕು’ ಎಂದು ಆಗ್ರಹಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ, SBI ಬ್ಯಾಂಕಿಗೆ 1 ಲಕ್ಷ ರೂ. ದಂಡ

ಈ ಹಕ್ಕೋತ್ತಾಯ ಮಂಡಿಸಲು ಡಿ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾಂಕೇತಿಕ ಧರಣಿ ನಡೆಸಲಾಗುತ್ತದೆ. ಅರೆ ಸೇನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತ ಪ್ರಾಣ ಅರ್ಪಣೆ ಮಾಡಿದ 38 ಸಾವಿರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಸಂಘದ ಅಧ್ಯಕ್ಷ ಡಿ.ಆಂಜನೇಯ, ಉಪಾಧ್ಯಕ್ಷ ಎನ್.ರುಕ್ಮ, ಕಾರ್ಯದರ್ಶಿ ಚಿನ್ನಪ್ಪ, ಸಹ ಕಾರ್ಯದರ್ಶಿ ಆನಂದ ಸ್ವಾಮಿ, ನರಿಸಿಂಹ ಪೈ, ನಾಗರಾಜ್, ಸಂಚಾಲಕರಾದ ಅಭಿಲಾಷ ಎನ್.ಎಂ., ಮಾಲ್ತೇಶ್ ಸೇರಿದಂತೆ ಹಲವರು ಇದ್ದರು.

Shimoga nanjappa hospital

(para military)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment