ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 05 ಏಪ್ರಿಲ್ 2020
ಹೊರ ಜಿಲ್ಲೆಗಳಿಗೆ ತೆರಳುವ ಬಯಸುವವರಿಗೆ ವನ್ ವೇ ಪಾಸ್ ನೀಡಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸೂಡಾ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಇಲ್ಲಿಂದ ಬೆಂಗಳೂರಿಗೆ ಹೋಗಲು ಬಯಸುವವರಿಗೆ ಪಾಸ್ ನೀಡುತ್ತೇವೆ. ಪಾಸ್ ಪಡೆದವರು ಬೆಂಗಳೂರಿಗೆ ಹೋಗಬಹುದು. ಆದರೆ ಅಲ್ಲಿಂದ ಮರಳಿ ಬರಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಬೇರೆ ಕಡೆ ಸಿಲುಕಿರುವವರನ್ನು ಹೋಗಿ ಕರೆದುಕೊಂಡು ಬರಲು ಸಹ ಪಾಸ್ ನೀಡಲಾಗುವುದು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತ್ರವಲ್ಲದೆ, ತಾಲೂಕುಗಳಲ್ಲಿ ತಹಶೀರ್‍ಗಳು ಸಹ ಪಾಸ್ ನೀಡಲಿದ್ದಾರೆ. ಜನರು ಗೊಂದಲಗೊಳ್ಳುವ ಅಗತ್ಯವಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಿಪ್ಪ ತಿಳಿಸಿದರು.
ಅಡ್ಡದಾರಿಯಲ್ಲಿ ಜಿಲ್ಲೆ ಪ್ರವೇಶಿಸಿದರೆ ಕ್ರಮ
ಬೇರೆ ಜಿಲ್ಲೆಗಳಿಂದ ಪಾಸ್ ಇಲ್ಲದೆ ಅನಧಿಕೃತವಾಗಿ ಅಡ್ಡದಾರಿಯಲ್ಲಿ ಜಿಲ್ಲೆ ಪ್ರವೇಶಿಸುವವರ ಮೇಲೆ ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಅಂತಹವರ ಮೇಲೆ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422