ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ತಾಂತ್ರಿಕ ಕಾರಣದಿಂದ ವಿಮಾನ ಹಾರಾಟ ರದ್ದಾಗಿದ್ದರಿಂದ (Flight Cancel) ಪ್ರಯಾಣಿಕರು ವಿಮಾನಯಾನ ಸಂಸ್ಥೆ ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಸಂಜೆ ಘಟನೆಯಾಗಿದೆ.
ಶಿವಮೊಗ್ಗದಿಂದ ಇಂದು ಸಂಜೆ ಹೈದರಾಬಾದ್‌ಗೆ ತೆರಳಬೇಕಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ವಿಮಾನ ಹಾರಾಟ ರದ್ದುಗೊಳಿಸಲಾಯಿತು. ಬಹುಹೊತ್ತಿನ ಬಳಿಕ ವಿಮಾನ ರದ್ದಾದ ಮಾಹಿತಿ ನೀಡುತ್ತಿದ್ದಂತೆ ಪ್ರಯಾಣಿಕರು ಆಕ್ರೋಶಗೊಂಡರು. ಸ್ಪೈಸ್ ವಿಮಾನಯಾನ ಸಂಸ್ಥೆ ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು.

ಸುಮಾರು 60 ಪ್ರಯಾಣಿಕರು ಹೈದರಾಬಾದ್‌ಗೆ ಟಿಕೆಟ್ ಕಾಯ್ದಿರಿಸಿದ್ದರು. ಪ್ರಯಾಣಿಕರ ಒತ್ತಡಕ್ಕೆ ಮಣಿದು ಸುಮಾರು 30 ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಿ ಹೈದರಾಬಾದ್‌ಗೆ ಕಳುಹಿಸಲು ಸ್ಪೈಸ್ ಸಂಸ್ಥೆ ಮುಂದಾಗಿದೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ, ವಿಮಾನಗಳು ಎಷ್ಟು ಬಾರಿ ಹಾರಾಡಿವೆ?







