ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕಡೇ ಕ್ಷಣದಲ್ಲಿ ಶಿವಮೊಗ್ಗ – ತಿರುಪತಿ ವಿಮಾಯನ ಹಾರಾಟ ರದ್ದುಗೊಳಿಸಲಾಗಿದೆ. ಇದರಿಂದ ಅಕ್ರೋಶಗೊಂಡ ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದಿಢೀರ್ ರದ್ದಾಗಿದ್ದೇಕೆ ವಿಮಾನ?
ಸ್ಟಾರ್ ಏರ್ ಸಂಸ್ಥೆಯು ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಗೆ ವಿಮಾನಯಾನ ಸೇವೆ ಒದಗಿಸುತ್ತಿದೆ. ಶನಿವಾರ ಬೆಳಗ್ಗೆ ವಿಮಾನವು ಹೈದರಾಬಾದ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿತ್ತು. ಬಳಿಕ ಶಿವಮೊಗ್ಗದಿಂದ ತಿರುಪತಿಗೆ ತೆರಳಬೇಕಿತ್ತು. ಆದರೆ ಕಡೆಯ ಕ್ಷಣದಲ್ಲಿ ತಿರುಪತಿ ಮಾರ್ಗದ ಪ್ರಯಾಣ ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸ್ಟಾರ್ ಏರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳಿಗೆ ಪ್ರಯಾಣಿಕರ ಕ್ಲಾಸ್
ಸ್ಟಾರ್ ಏರ್ ಸಂಸ್ಥೆ ದಿಢೀರ್ ಪ್ರಯಾಣ ರದ್ದುಗೊಳಿಸಿದ್ದು ಇದೇ ಮೊದಲೇನಲ್ಲ. ಶಿವಮೊಗ್ಗದಲ್ಲಿ ತನ್ನ ಸೇವೆ ಆರಂಭಿಸಿದ ಅತ್ಯಂತ ಕಡಿಮೆ ಅವಧಿಯಲ್ಲಿ ಹಲವು ಭಾರಿ ಹಾರಾಟ ರದ್ದು ಮಾಡಿದೆ. ಹಾಗಾಗಿ ಪದೇ ಪದೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ ಮಹಿಳೆಯೊಬ್ಬರು ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸ್ಟಾರ್ ಏರ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕೇವಲ 13 ಪ್ರಯಾಣಿಕರು ಇದ್ದರು ಎಂಬ ಕಾರಣಕ್ಕೆ ಪ್ರಯಾಣ ರದ್ದುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸ್ಟಾರ್ ಏರ್ ವಿರುದ್ಧ ದೂರು
ದಿಢೀರ್ ಪ್ರಯಾಣ ರದ್ದು ಮಾಡುತ್ತಿರುವ ಸ್ಟಾರ್ ಏರ್ ವಿರುದ್ಧ ನಾಗರಿಕ ವಿಮಾನಯಾನ ಸೇವೆ ಪ್ರಾಧಿಕಾರ ಮತ್ತು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಯಾಣಿಕರು ನಿಗದಿತ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ಮುಂದಿನ ಪ್ರಯಾಣಕ್ಕೆ ವಿಮಾನಗಳ ಸೀಟ್ ಬುಕ್ ಮಾಡಿರುತ್ತಾರೆ, ಯಾವುದಾದರು ಸಭೆಗೆ ತೆರಳುವವರಿರುತ್ತಾರೆ. ಶಿವಮೊಗ್ಗದಲ್ಲಿ ವಿಮಾನ ದಿಢೀರ್ ರದ್ದಾದರೆ ನಿಗದಿತ ಸಮಯಕ್ಕೆ ಅಲ್ಲಿಗೆ ತಲುಪಲಾಗದೆ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ದೂರು ಸಲ್ಲಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಇದನ್ನೂ ಓದಿ – ಹೆದ್ದಾರಿಯಲ್ಲಿ ಮೂವರಿಗೆ ಅಪ್ಪಳಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು