ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ತಾಂತ್ರಿಕ ಕಾರಣದಿಂದ ಗೋವಾಗೆ ತೆರಳಬೇಕಿದ್ದ ವಿಮಾನ ರದ್ದಾಗಿದ್ದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾಯಾನ ಸಂಸ್ಥೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬುಧವಾರ ಬೆಳಗ್ಗೆ ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ವಿಮಾನಯಾನ ಸೇವೆ ರದ್ದಾಗಿದೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಗೋವಾಗೆ ತೆರಳಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಮಂಜು ಮುಸುಕಿದ ವಾತಾವರಣದಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್‌ಗೆ ಸಮಸ್ಯೆ ಉಂಟಾಗುತ್ತಿದೆ. ಈ ಸಮಸ್ಯೆ ಸರಿಪಡಿಸಲು ಸಂಸದ ರಾಘವೇಂದ್ರ ಅವರು ಕೇಂದ್ರ ವಿಮಾನಯಾನ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೆಲವೇ ದಿನದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಇದನ್ನೂ ಓದಿ – ಗೃಹಿಣಿಗೆ ಲಕ್ಷ ಲಕ್ಷ ರೂ. ಪಂಗನಾಮ, ಮುಂದಿನ ಟಾರ್ಗೆಟ್ ನೀವೂ ಆಗಬಹುದು? ಏನಿದು ಕೇಸ್?