ಮಳೆ, ಬಿಸಿಲು ಲೆಕ್ಕಿಸದೆ ಮುಂದುವರೆದ ಮುಷ್ಕರ, ಪೌರ ಕಾರ್ಮಿಕರ ಬೇಡಿಕೆಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 2 ಜುಲೈ 2022

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನವು ಮುಂದುವರೆದಿದೆ. ಬಿಸಿಲು, ಮಳೆಯನ್ನು ಲೆಕ್ಕಿಸದೆ ರಾಜ್ಯಾದ್ಯಂತ ಪೌರ ಕಾರ್ಮಿಕರು ಮುಷ್ಕರ (PROTEST) ನಡೆಸುತ್ತಿದ್ದಾರೆ.

Shimoga Nanjappa Hospital

ಶಿವಮೊಗ್ಗದಲ್ಲಿ ಶುಕ್ರವಾರ ಇಡೀ ದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಇವತ್ತು ನಗರದ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ಮಾಡಿದರು. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರು, ವಿವಿಧ ಸಂಘಟನೆಗಳು ಪೌರ ಕಾರ್ಮಿಕರಿಗೆ ಬೆಂಬಲ ಸೂಚಿಸಿವೆ.

ಬಿಸಿಲು, ಮಳೆಯನ್ನು ಲೆಕ್ಕಿಸದೆ ನೂರಾರು ಪೌರ ಕಾರ್ಮಿಕರು ಪ್ರತಿಭಟನೆ (PROTEST) ನಡೆಸುತ್ತಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಹೋರಾಟ ಚುರುಕು

ಭದ್ರಾವತಿ : ನಗರಸಭೆಯ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಬಸವರಾಜ್ ಆನೆಕೊಪ್ಪ, ಅಂಜುಮನ್ ಸಮಿತಿ ಅಧ್ಯಕ್ಷ ಮುರ್ತುಜಾ ಖಾನ್, ಜೆಡಿಎಸ್ ಅಧ್ಯಕ್ಷ ಕರುಣಾಮೂರ್ತಿ, ಆಮ್ ಆದ್ಮಿ ಪಕ್ಷದ ರವಿಕುಮಾರ್ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

bhadravathi sagara paurakarmika protest

ಸಾಗರ : ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಶಿಕಾರಿಪುರ : ಪುರಸಭೆ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಡಿಮಾಂಡ್ ಈಡೇರುವ ತನಕ ಮುಷ್ಕರ ಮುಂದುವರೆಯಲಿದೆ ಎಂದು ಎಚ್ಚರಿಸಿದರು.

ಶಿರಾಳಕೊಪ್ಪ ಪುರಸಭೆ, ಸಾಗರ ತಾಲೂಕಿನ ಕಾರ್ಗಲ್, ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯಾದ್ಯಂತ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ.

ಪೌರ ಕಾರ್ಮಿಕರ ಬೇಡಿಕೆಗಳೇನು?

ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ಪಾವತಿ ಕಾರ್ಮಿಕರು, ಹೊರ ಗುತ್ತಿಗೆ ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಹೆಲ್ಪರ್ಸ್, ಮನೆಗಳಿಂದ ಕಸ ಸಂಗ್ರಹಿಸುವ ಪೌರ ಕಾರ್ಮಿಕರ ಸೇವೆಯನ್ನು ಏಕಕಾಲಕ್ಕೆ ಕಾಯಂಗೊಳಿಸಬೇಕು.

ನೇರ ಪಾವತಿ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಮೂಲ ಸೌಕರ್ಯ ಒದಗಿಸಬೇಕು. ಹೆರಿಗೆ ಭತ್ಯೆ, ವಿಶ್ರಾಂತಿ ಗೃಹ, ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಕಾಯಂ ಪೌರ ಕಾರ್ಮಿಕರಿಗೆ ಜಾರಿಗೊಳಿಸಿರುವ ಗೃಹ ಭಾಗ್ಯ ಯೋಜನೆಯನ್ನು ಎಲ್ಲಾ ಪೌರ ಕಾರ್ಮಿಕರಿಗೂ ವಿಸ್ತರಿಸಬೇಕು.  ನಿವೃತ್ತ ಸ್ವಚ್ಛತಾ ಕಾರ್ಮಿಕರಿಗೆ ತಲಾ 10 ಲಕ್ಷ ರೂ. ಪರಿಹಾರ, ಮಾಸಿಕ 5 ಸಾವಿರ ರೂ. ನಿವೃತ್ತಿ ವೇತನ ನೀಡಬೇಕು. ಅವಲಂಬಿತರಿಗೆ ಉದ್ಯೋಗ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಟೈಲರ್ ಬರ್ಬರ ಹತ್ಯೆಗೆ ಖಂಡಿಸಿ ಶಿವಮೊಗ್ಗದಲ್ಲಿ ಆಕ್ರೋಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment