ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
SHIMOGA : ಬಹು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿಯೆ ಬೀಡು ಬಿಟ್ಟು ಕೆಲಸ ಮಾಡದಿರುವ ಸರ್ಕಾರಿ ಅಧಿಕಾರಿಗಳು (Officers) ಹಾಗೂ ಸಿಬ್ಬಂದಿಯನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಪೀಸ್ ಅರ್ಗನೈಸೇಷನ್‌ನ ಜಿಲ್ಲಾಧ್ಯಕ್ಷ ರಿಯಾಜ್ ಅಹಮ್ಮದ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಿಯಾಜ್ ಅಹಮದ್, ದೀರ್ಘ ಕಾಲದಿಂದ ಇಲ್ಲಿಯೇ ಉಳಿದಿರುವ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಯಾವುದೇ ಅರ್ಜಿ ಕೊಟ್ಟರೂ ಅದನ್ನು ಗಮನಿಸುವುದಿಲ್ಲ ಎಂದು ಆರೋಪಿಸಿದರು.

ಶಿವಮೊಗ್ಗ ನಗರದಲ್ಲಿ ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ವಿವಿಧೆಡೆ ಬೀದಿ ದೀಪಗಳಿಲ್ಲ. ಹಂದಿ, ನಾಯಿಗಳ ಉಪಟಳ ಜಾಸ್ತಿಯಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಹಲವು ಭಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಸೈಯ್ಯದ್ ಶಫೀವುಲ್ಲಾ, ಅಯೂಬ್ ಖಾನ್, ಇಮ್ರಾನ್ ಖಾನ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಪೆಟ್ರೋಲ್, ಡಿಸೇಲ್ ದರ ಹೆಚ್ಚಳ, ಶಿವಮೊಗ್ಗದಲ್ಲಿ ಲಾರಿ ಮಾಲೀಕರ ಆಕ್ರೋಶ, ಏನಂದ್ರು?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





