ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | MARRIAGE| 08 ಮೇ 2022
ಮದುವೆ ಊಟ ಮಾಡಿದ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಸುಮಾರು 80ಕ್ಕೂ ಅಧಿಕ ಜನರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಗೆಜ್ಜೇನಹಳ್ಳಿ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ವಿವಾಹದ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಅಸ್ವಸ್ಥರಾಗಿದ್ದಾರೆ.
ಮೂರನೆ ಪಂಕ್ತಿಯಿಂದ ಸಮಸ್ಯೆ
ಮೊದಲ ಎರಡು ಪಂಕ್ತಿಯಲ್ಲಿ ಊಟ ಮಾಡಿದವರಿಗೆ ಯಾವುದೆ ಸಮಸ್ಯೆ ಉಂಟಾಗಿಲ್ಲ. ಮೂರನೆ ಪಂಕ್ತಿಯ ನಂತರ ಊಟ ಮಾಡಿದವರಿಗೆ ಸಮಸ್ಯೆ ಕಾಣಿಸಕೊಂಡಿದೆ. ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಗೆಜ್ಜೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು.
ಸುಮಾರು 80 ಮಂದಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದದ್ದರಿಂದ ಮಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೀರು ಅಥವಾ ಆಹಾರದಲ್ಲಿ ವ್ಯತ್ಯಾಸ ಆಗಿರುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಕಾರು ಗಾಜು ಪೀಸ್ ಪೀಸ್ ಕೇಸ್, ಮತ್ತೂರಿಗೆ ಗೃಹ ಸಚಿವರ ಭೇಟಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422