ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಮೊಬೈಲ್‌ ಮರೆತಿದ್ದ ಮಹಿಳೆಗೆ ಆಮೇಲೆ ಸಿಕ್ತು ಗುಡ್‌ ನ್ಯೂಸ್‌

ಶಿವಮೊಗ್ಗ: ರೈಲಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ₹15,000 ಮೌಲ್ಯದ ಮೊಬೈಲ್ ಫೋನ್ ಅನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಅಲ್ಲದೆ ಅದನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಂಗಳೂರು – ತಾಳಗುಪ್ಪ ಇಂಟರ್‌ ಸಿಟಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಮರೆತು ಹೋಗಿದ್ದರು. ಈ ಕುರಿತು ಆರ್‌ಪಿಎಫ್‌ ಸಿಬ್ಬಂದಿಗೆ ದೂರು ನೀಡಿದ್ದರು. ‘ಆಪರೇಷನ್ ಅಮಾನತ್’ ಅಡಿ ಕಾರ್ಯಾಚರಣೆ ನಡೆಸಿದ ಆರ್‌ಪಿಎಫ್‌ ಸಿಬ್ಬಂದಿ, ಬೋಗಿಯಲ್ಲಿ ಪರಿಶೀಲಿಸಿ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪರಿಶೀಲನೆ ನಡೆಸಿ, ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

phone-forgotten-on-Intercity-Express