SHIVAMOGGA LIVE NEWS, 12 JANUARY 2024
ಶಿವಮೊಗ್ಗ : ಖ್ಯಾತ ಛಾಯಾಗ್ರಾಹಕ (photographer), ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ನಂದನ್ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
ಇದನ್ನೂ ಓದಿ – ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಇನ್ನಿಲ್ಲ, ಪತ್ರಿಕಾ ಭವನದಲ್ಲಿ ಅಂತಿಮ ದರ್ಶನ