ನಾಮಪತ್ರ ಸಲ್ಲಿಕೆ ಆರಂಭ, ಡಿ.5 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ನಡೆಯುವ ಮತದಾನದ ದಿನಾಂಕವನ್ನು ಚುನಾವಣಾಧಿಕಾರಿ ಎನ್.ಹೇಮಂತ್‌ ಪ್ರಕಟಿಸಿದ್ದಾರೆ. 

ನ.13 ರಿಂದ 24ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ನ.26 ರ ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.29 ಕೊನೆ ದಿನ. ಡಿ.5ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಿಂದ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಯತಲಿದೆ. 50 ಮತದಾರರು ಇದ್ದಾರೆಎನ್‌.ಹೆಮೇಂತ್‌, ಚುನಾವಣಾಧಿಕಾರಿ

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2025

Leave a Comment