ಶಿವಮೊಗ್ಗ ಲೈವ್
ಶಿವಮೊಗ್ಗ: ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ನಡೆಯುವ ಮತದಾನದ ದಿನಾಂಕವನ್ನು ಚುನಾವಣಾಧಿಕಾರಿ ಎನ್.ಹೇಮಂತ್ ಪ್ರಕಟಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನ.13 ರಿಂದ 24ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ನ.26 ರ ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.29 ಕೊನೆ ದಿನ. ಡಿ.5ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಿಂದ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಯತಲಿದೆ. 50 ಮತದಾರರು ಇದ್ದಾರೆಎನ್.ಹೆಮೇಂತ್, ಚುನಾವಣಾಧಿಕಾರಿ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
