ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 FEBRUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಮನೆಗಳ್ಳತನ ಮಾಡಿ ಚಿನ್ನಾಭರಣವನ್ನು ಫೈನಾನ್ಸ್ ಸಂಸ್ಥೆಯಲ್ಲಿ ಗಿರವಿ ಇಟ್ಟಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಂದ ಸೌದಿ ಆರೇಬಿಯಾದ ಕರೆನ್ಸಿ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಮಂಜುನಾಥ ಬಡಾವಣೆಯ ಸಲೀಂ (44) ಎಂಬಾತನನ್ನು ಬಂಧಿಸಲಾಗಿದೆ.
ಸೌದಿ ಅರೇಬಿಯಾದ ನೋಟ್ ಕದ್ದಿದ್ದ
ಶಿವಮೊಗ್ಗದ ಆರ್‌ಎಂಎಲ್ ನಗರದ ಸಲ್ಮಾ ಖಾನಂ ಅವರು ಸೌದಿ ಅರೇಬಿಯಾದಲ್ಲಿ ತಮ್ಮ ಪತಿ ಬಳಿ ತೆರಳಿದ್ದರು. ಈ ವೇಳೆ ಮನೆಯ ಬೀಗ ಒಡೆದು ಬೀರುವಿನಲ್ಲಿಟ್ಟದ್ದ ಚಿನ್ನಾಭರಣ, 500 ರಿಯಲ್ ಮುಖಬೆಲೆಯ 9 ಸೌದಿ ಅರೇಬಿಯಾದ ನೋಟುಗಳು ಕಳ್ಳತನವಾಗಿದ್ದವು. ಈ ಸಂಬಂಧ ಸಲ್ಮಾ ಖಾನಂ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಸಲೀಂ ಎಂಬಾತನನ್ನು ಬಂಧಿಸಿದ್ದಾರೆ.
ಫೈನಾನ್ಸ್ ಸಂಸ್ಥೆಯಲ್ಲಿ ಗಿರವಿ ಇಟ್ಟಿದ್ದ
ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಸಲೀಂ ಅವುಗಳನ್ನು ಮುತ್ತೂಟ್ ಫೈನಾನ್ಸ್ ಮತ್ತು ಐಐಎಫ್‌ಎಲ್ ಫೈನಾನ್ಸ್ ಸಂಸ್ಥೆಯಲ್ಲಿ ಗಿರವಿ ಇಟ್ಟಿದ್ದ. 155 ಗ್ರಾಂ ತೂಕದ 8.28 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, 21,400 ರೂ. ಮೌಲ್ಯದ ವಾಚುಗಳು, ಆರ್ಟಿಫಿಶಿಯಲ್ ಒಡವೆಗಳು, ವ್ಯಾನಿಟಿ ಬ್ಯಾಗ್ ಸೇರಿ ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಬಳಿ ಡಿವೈಡರ್ ತೆರವಿಗೆ ಮಾಜಿ ಕಾರ್ಪೊರೇಟರ್‌ಗಳ ಆಗ್ರಹ
ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ, ಪಿಎಸ್‌ಐಗಳಾದ ವಸಂತ ಹೆಚ್.ಸಿ, ಶ್ರೀನಿವಾಸ್.ಆರ್, ಮಂಜಮ್ಮ, ಸಿಬ್ಬಂದಿ ಲಚ್ಚಾ ನಾಯ್ಕ, ಪಾಲಾಕ್ಷನಾಯ್ಕ, ಸುರೇಶ್ ಬಿ,ಬಿ, ಚಂದ್ರನಾಯ್ಕ, ಪುನೀತ್ ಕುಮಾರ್, ನಿತಿನ್ ಮತ್ತು ಚಂದ್ರನಾಯ್ಕ ಅವರನ್ನು ಒಳಗೊಂಡ ತನಿಖಾ ತಂಡ ಆರೋಪಿಯನ್ನು ಬಂಧಿಸಿದೆ.