ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIMOGA NEWS, 17 SEPTEMBER 2024 : ಹಿಂದು ಮಹಾಸಭಾ ಗಣಪತಿ ಮೆರವಣಿಗೆಗೆ ಬಿಗಿ ಪೊಲೀಸ್ (Police) ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಡೆ ಪೊಲೀಸ್ ಸರ್ಪಗಾವಲು ಮತ್ತು ಸಿಸಿಟಿವಿ ಕಣ್ಗಾವಲು ಇರಲಿದೆ.
ಮೆರವಣಿಗೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ 3 ಎಎಸ್ಪಿಗಳು, 24 ಡಿವೈಎಸ್ಪಿಗಳು, 60 ಇನ್‌ಸ್ಪೆಕ್ಟರ್‌ಗಳು, 110 ಪಿಎಸ್‌ಐಗಳು, 200 ಎಎಸ್‌ಐ, 3500ಎಚ್‌ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿ, 8 ಡಿಎಆರ್ ತುಕಡಿ, 10 ಕೆಎಸ್‌ಆರ್‌ಪಿ ತುಕಡಿ, 1 ಆರ್‌ಎಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ. 100 ವಿಡಿಯೋ ಮತ್ತು 5 ಡ್ರೋಣ್ ಕ್ಯಾಮರಾಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಮೆರವಣಿಗೆ ಮಾರ್ಗ ಮತ್ತು ಪ್ರಮುಖ ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳ ಮೂಲಕ ಕಣ್ಣಾವಲಿರಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶ ಸೇರಿ ಮೆರವಣಿಗೆ ಹೊರಡುವ ಮಾರ್ಗದಲ್ಲಿ ಈಗಾಗಲೇ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ. ಮೆರವಣಿಗೆಯಲ್ಲಿ ಸಾಗುವ ಹಲವೆಡೆ ವಾಚ್ ಟವರ್ ನಿರ್ಮಿಸಲಾಗಿದೆ.

ಇನ್ನು, ಬಂದೋಬಸ್ತ್‌ಗೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಗೆ ಡಿ.ಎ.ಆರ್ ಮೈದಾನದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಪ್ರಮುಖ ಸೂಚನೆ ನೀಡಿದರು.

ಇದನ್ನೂ ಓದಿ » ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?






