ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸದಾ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವ ಪೊಲೀಸರು, ತಮ್ಮ ಮಕ್ಕಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುವುದನ್ನು ಕಂಡು ಸಂತಸಪಟ್ಟರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಭಾನುವಾರ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಮಕ್ಕಳ ಕ್ರೀಡಾಕೂಟವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಉದ್ಘಾಟಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸಿದ್ದ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಶುಭ ಕೋರಿದರು.
ಕ್ರೀಡಾಕೂಟದಲ್ಲಿ ಕಪ್ಪೆ ಜಿಗಿತ, ಓಟ, ಬಕೆಟ್‌ಗೆ ಬಾಲ್ ಎಸೆಯುವುದು, ಹಿಟ್ ದ ವಿಕೆಟ್, ಗುಂಡು ಎಸೆತ ಹಾಗೂ ಸ್ಲೋ ಸೈಕಲ್ ರೇಸ್ ಸ್ಪರ್ಧೆಗಳನ್ನು ಮಕ್ಕಳ ವಯೋಮಿತಿಗೆ ಅನುಗುಣವಾಗಿ ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ವಿಶೇಷ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ರಮೇಶ್ ಕುಮಾರ್, ಡಿಎಆರ್ ಪೊಲೀಸ್ ಉಪಾಧೀಕ್ಷಕ ದಿಲೀಪ್, ಆರ್‌ಪಿಐ ಸೋಮಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬದವರಿದ್ದರು.




ಇದನ್ನೂ ಓದಿ » ಸ್ವಂತ ಹಣದಲ್ಲಿ ಹೆದ್ದಾರಿಯ ಅಪಾಯಕಾರಿ ಗುಂಡಿ ಮುಚ್ಚಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















