ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ಪೊಲೀಸ್ ಇಲಾಖೆ ವತಿಯಿಂದ ನಾಶಪಡಿಸಲಾಯಿತು. ಶಿವಮೊಗ್ಗದ ಮಾಚೇನಹಳ್ಳಿಯ ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿಯಲ್ಲಿ 13.16 ಲಕ್ಷ ರೂ. ಮೌಲ್ಯದ ಗಾಂಜಾ ನಾಶಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
42 ಪ್ರಕರಣಗಳಲ್ಲಿ 34.825 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಇದರ ಮೌಲ್ಯ 13.16 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಗಾಂಜಾವನ್ನು ನಾಶಪಡಿಸಲಾಯಿತು.
ಪ್ರಕರಣವಾರು ಪ್ಯಾಕೆಟ್‌ನಲ್ಲಿ ತಂದು ನಾಶ
ವಿವಿಧ ಪ್ರಕರಣವಾರು ಗಾಂಜಾವನ್ನು ಪ್ಯಾಕ್ ಮಾಡಲಾಗಿತ್ತು. ಆಯಾ ಪ್ರಕರಣಕ್ಕೆ ಸಂಬಂಧಿಸಿದ ಗಾಂಜಾವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಯಿತು. ಈ ವೇಳೆ ಪೊಲೀಸ್ ಇಲಾಖೆ ವತಿಯಿಂದ ವಿಲೇವರಿಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಯಿತು. ಕೆಲವೇ ನಿಮಿಷದಲ್ಲಿ ಸಂಪೂರ್ಣ ಗಾಂಜಾವನ್ನು ನಾಶಪಡಿಸಲಾಯಿತು.
ಮಾಹಿತಿ ನೀಡಿದರೆ ಕಠಿಣ ಕ್ರಮ
ಇನ್ನು, ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ಪೊಲೀಸ್ ಇಲಾಖೆಯಿಂದ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಗಾಂಜಾ ಕುರಿತು ಸಾರ್ವಜನಿಕರಿಗೆ ಮಾಹಿತಿ ತಿಳಿದುಬಂದಲ್ಲಿ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ