ಚೋರಡಿ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆಯಿಂದ ಸನ್ಮಾನ, ಪ್ರಶಂಸನಾ ಪತ್ರ, ಸನ್ಮಾನಕ್ಕೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Modern Cement Articles

SHIVAMOGGA LIVE | 11 JULY 2023

SHIMOGA : ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭ ಗಾಯಾಳುಗಳಿಗೆ ನೆರವು ನೀಡಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರೊಂದಿಗೆ ಕೈ ಜೋಡಿಸಿದ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು (Felicitation).

Felicitation-for-Choradi-Villagers-by-Shimoga-SP-Mithun-Kumar-IPS

ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಚೋರಡಿ ಗ್ರಾಮದ ಆರು ಮಂದಿಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಸನ್ಮಾನಿಸಿದರು (Felicitation). ಚೋರಡಿ ಗ್ರಾಮದ ರಾಜೇಶ್‌, ನಿರಂಜನ ಗೌಡ, ಲೋಹಿತ್‌ ಪ್ರಸಾದ್‌, ಸುಮಂತ, ಲಕ್ಷ್ಮೀನಾರಾಯಣ, ನಿರಂಜನ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಂಸನಾ ಪ್ರತ ನೀಡಿಲಾಯಿತು.

ಆಗಿದ್ದೇನು?

ಮೇ 11ರಂದು ಚೋರಡಿ ಗ್ರಾಮದ ಕುಮದ್ವತಿ ಸೇತುವೆ ಮೇಲೆ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದರು. ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ನಡೆದ ತಕ್ಷಣ ಚೋರಡಿ ಗ್ರಾಮಸ್ಥರು ನೆರವಿಗೆ ಧಾವಿಸಿದ್ದರು. ಗಾಯಾಳುಗಳನ್ನು ರಕ್ಷಿಸಿ, ಆಂಬುಲೆನ್ಸ್‌ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಿದ್ದರು.

Two-Bus-Collides-at-Choradi-in-Shimoga.

ಅಪಘಾತದ ಹಿನ್ನೆಲೆ ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಈ ವೇಳೆ ಗ್ರಾಮಸ್ಥರು ಪೊಲೀಸರೊಂದಿಗೆ ಕೈ ಜೋಡಿಸಿ, ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಘಟನೆ ಸಂದರ್ಭ ಪೊಲೀಸರಿಗೆ ನೆರವು ನೀಡಿದವರಿಗೆ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ, ಡಿಸಿಆರ್‌ಬಿ ಡಿವೈಎಸ್‌ಪಿ ಪ್ರಭು ಡಿ.ಟಿ, ಡಿವೈಎಸ್‌ಪಿ ಸುರೇಶ್‌, ಇನ್ಸ್‌ಪೆಕ್ಟರ್‌ ಹರೀಶ್‌ ಪಟೇಲ್‌, ಕುಂಸಿ ಠಾಣೆ ಸಿಬ್ಬಂದಿ ಹಾಜರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment