ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE | 11 JULY 2023
SHIMOGA : ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭ ಗಾಯಾಳುಗಳಿಗೆ ನೆರವು ನೀಡಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರೊಂದಿಗೆ ಕೈ ಜೋಡಿಸಿದ ಗ್ರಾಮಸ್ಥರಿಗೆ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು (Felicitation).

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಚೋರಡಿ ಗ್ರಾಮದ ಆರು ಮಂದಿಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಸನ್ಮಾನಿಸಿದರು (Felicitation). ಚೋರಡಿ ಗ್ರಾಮದ ರಾಜೇಶ್, ನಿರಂಜನ ಗೌಡ, ಲೋಹಿತ್ ಪ್ರಸಾದ್, ಸುಮಂತ, ಲಕ್ಷ್ಮೀನಾರಾಯಣ, ನಿರಂಜನ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಂಸನಾ ಪ್ರತ ನೀಡಿಲಾಯಿತು.
ಆಗಿದ್ದೇನು?
ಮೇ 11ರಂದು ಚೋರಡಿ ಗ್ರಾಮದ ಕುಮದ್ವತಿ ಸೇತುವೆ ಮೇಲೆ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದರು. ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ನಡೆದ ತಕ್ಷಣ ಚೋರಡಿ ಗ್ರಾಮಸ್ಥರು ನೆರವಿಗೆ ಧಾವಿಸಿದ್ದರು. ಗಾಯಾಳುಗಳನ್ನು ರಕ್ಷಿಸಿ, ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಿದ್ದರು.

ಅಪಘಾತದ ಹಿನ್ನೆಲೆ ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಈ ವೇಳೆ ಗ್ರಾಮಸ್ಥರು ಪೊಲೀಸರೊಂದಿಗೆ ಕೈ ಜೋಡಿಸಿ, ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಘಟನೆ ಸಂದರ್ಭ ಪೊಲೀಸರಿಗೆ ನೆರವು ನೀಡಿದವರಿಗೆ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಸಿಆರ್‌ಬಿ ಡಿವೈಎಸ್‌ಪಿ ಪ್ರಭು ಡಿ.ಟಿ, ಡಿವೈಎಸ್‌ಪಿ ಸುರೇಶ್, ಇನ್ಸ್‌ಪೆಕ್ಟರ್ ಹರೀಶ್ ಪಟೇಲ್, ಕುಂಸಿ ಠಾಣೆ ಸಿಬ್ಬಂದಿ ಹಾಜರಿದ್ದರು.







