5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 NOVEMBER 2022

SHIMOGA | ರೌಡಿಗಳು, ಸಮಾಜ ಘಾತುಕ ಶಕ್ತಿಗಳಲ್ಲಿ ಭಯ ಹುಟ್ಟಿಸಲು ನಗರದ ಪೊಲೀಸರು ಪದೇ ಪದೆ ತಮ್ಮ ಬಂದೂಕಿಗೆ ಕೆಲಸ ಕೊಡುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ, ಜನರಲ್ಲಿ ಭೀತಿ ಮೂಡಿಸುತ್ತಿದ್ದವರ ಮೇಲೆ ಗುಂಡು (Police Fire) ಹಾರಿಸಲಾಗಿದೆ. ಈ ವರ್ಷ ಐವರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ.

Shimoga Nanjappa Hospital

ಕಾರ್ಯಾಚರಣೆ ವೇಳೆ ಮತ್ತು ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆಯೆ ಸಮಾಜ ಘಾತುಕರು ದಾಳಿ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಗುಂಡ ಹಾರಿಸಲಾಗಿದೆ.

(Police Fire)

ಯಾರಿಗೆಲ್ಲ ಗುಂಡು ಹೊಡೆಯಲಾಗಿದೆ?

♦ ಅರ್ಷದ್ ಖಾನ್ | ಜೂನ್ 3, 2022

ಶಿವಮೊಗ್ಗದ ಅನುಪಿನಕಟ್ಟೆ ಬಳಿ ದರೋಡೆ ಹೊಂಚು ಸಂಬಂಧ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತುಂಗಾ ನಗರ ಠಾಣೆ ಪೊಲೀಸರು ದರೋಡೆಕೋರರ ಬಂಧನಕ್ಕೆ ತೆರಳಿದ್ದರು. ಕಾರ್ಯಾಚರಣೆ ವೇಳೆ ರೌಡಿ ಅರ್ಷದ್ ಖಾನ್, ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ. ಆಗ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ಹಾರಿಸಿದ ಗುಂಡು ಅರ್ಷದ್ ಖಾನ್ ಕಾಲನ್ನು ಸೀಳಿತ್ತು. (Police Fire)

♦ ಶಾಹಿದ್ ಖುರೇಶಿ | ಜೂನ್ 21, 2022

ರಾಬರಿ ಪ್ರಕರಣಗಳ ಪ್ರಮುಖ ಆರೋಪಿ ಶಾಹಿದ್ ಖುರೇಶಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಕೆ.ಆರ್.ಪುರಂ ಬಳಿ ಆತ ಇರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಕ್ರೈಮ್ ವಿಭಾಗದ ಸಿಬ್ಬಂದಿ ಗುರುನಾಯಕ್ ಮತ್ತು ರಮೇಶ್ ತೆರಳಿದ್ದರು. ಆತನನ್ನು ಹಿಡಿಯಲು ಹೋದಾಗ ರಮೇಶ್ ಅವರ ಕೈಗೆ ಮತ್ತು ಗುರುನಾಯಕ್ ಅವರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ. ಕೆಲವೇ ಹೊತ್ತಿನಲ್ಲಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಶಾಹಿದ್ ಖುರೇಶಿ ಪತ್ತೆಯಾಗಿದ್ದಾನೆ. ಬಂಧಿಸಲು ತೆರಳಿದ್ದಾಗ, ಪುನಃ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.

♦ ಮೊಹಮ್ಮದ್ ಜಬಿ | ಆಗಸ್ಟ್ 16, 2022

ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಆಗಸ್ಟ್ 15ರಂದು ಪ್ರೇಮ್ ಸಿಂಗ್ (20) ಎಂಬ ಯುವಕನಿಗೆ ಮಾರಕಾಸ್ತ್ರದಿಂದ ಇರಿಯಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಾರ್ನಮಿ ಬೈಲಿನ ಮೊಹಮ್ಮದ್ ಜಬಿ ಅಲಿಯಾಸ್ ಚರ್ಬಿ ಎಂಬಾತನನ್ನು ಬಂಧಿಸಲು ತೆರಳಿದ್ದರು. ಎನ್.ಟಿ.ರಸ್ತೆಯ ಫಲಕ್ ಪ್ಯಾಲೆಸ್ ಸಮೀಪ ಮೊಹಮ್ಮದ್ ಜಬಿ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ವಿನೋಬನಗರ ಠಾಣೆ ಪಿಎಸ್ಐ ಮಂಜುನಾಥ ಕುರಿ ಅವರು ಬಂದೂಕಿನಿಂದ ಹಾರಿಸಿದ ಗುಂಡು ಬಲಗಾಲಿಗೆ ತಗುಲಿತ್ತು.

♦ ಜಬಿ | ಅಕ್ಟೋಬರ್ 26, 2022

ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿಜಯ್ ಎಂಬಾತನ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಬಿಯನ್ನು ಬಂಧಿಸಲಾಗಿತ್ತು. ಹರ್ಷ ಫರ್ನ್ ಹೊಟೇಲ್ ಸಮೀಪ ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಬಚ್ಚಿಡಲಾಗಿತ್ತು. ಮಹಜರ್ ಗೆ ಕರೆದೊಯ್ದ ಸಂದರ್ಭ ಜಯನಗರ ಠಾಣೆ ಸಿಬ್ಬಂದಿ ರೋಷನ್ ಅವರ ಮೇಲೆ ಜಬಿ ಹಲ್ಲೆಗೆ ಮುಂದಾಗಿದ್ದಾನೆ. ಆಗ ಕುಂಸಿ ಠಾಣೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಹಾರಿಸಿದ ಗುಂಡು ಜಬಿ ಕಾಲಿಗೆ ಹೊಕಿತ್ತು.

♦ ಅಸ್ಲಾಂ | ನವೆಂಬರ್ 5, 2022

ಬಿ.ಹೆಚ್.ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಅಶೋಕ್ ಪ್ರಭು ಎಂಬುವವರ ಜೊತೆ ಕ್ಷುಲಕ ವಿಚಾರಕ್ಕೆ ಖ್ಯಾತೆ ತೆಗೆದು, ಹರಿತವಾದ ವಸ್ತುವಿನಿಂದ ಕೆನ್ನೆ ಭಾಗಕ್ಕೆ ಇರಿಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಅಸ್ಲಾಂ ಪುರುಲೆ ಸಮೀಪದ ಲೇಔಟ್ ಒಂದರಲ್ಲಿ ಅವಿತಿದ್ದ. ಬಂಧನಕ್ಕೆ ತೆರಳಿದ್ದಾಗ ದೊಡ್ಡಪೇಟೆ ಠಾಣೆ ಸಿಬ್ಬಂದಿ ರಮೇಶ್ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್ಐ ವಸಂತ್ ಅವರು ಹಾರಿಸಿದ ಗುಂಡು ಅಸ್ಲಾಂನ ಕಾಲಿಗೆ ಹೊಕ್ಕಿದೆ.

ಶಿವಮೊಗ್ಗದಲ್ಲಿ ಸಮಜಾಘಾತುಕರಿಗೆ ಪೊಲೀಸರು ಗುಂಡು ಹಾರಿಸಿರುವುದು ಪುಡಿ ರೌಡಿಗಳಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಈಗಾಗಲೆ 23 ಮಂದಿಯನ್ನು ಗಡಿಪಾರು ಮಾಡಲು ಇಲಾಖೆ ಪಟ್ಟಿ ಸಿದ್ಧಪಡಿಸಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 5 ಲಕ್ಷ ರೂ. ದರೋಡೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment