BREAKING NEWS | ಶಿವಮೊಗ್ಗದಲ್ಲಿ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

SHIVAMOGGA LIVE NEWS | 5 NOVEMBER 2022

SHIMOGA | ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು (police fired) ಹಾರಿಸಿದ್ದಾರೆ.

Shimoga Nanjappa hospital

ಅಸ್ಲಂ ಎಂಬಾತನ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಪುರಲೆ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಡಾವಣೆಯೊಂದರಲ್ಲಿ ಅಸ್ಲಂ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದರು.

(police fired)

ಚಾಕುವಿನಿಂದ ದಾಳಿ ಮಾಡಿದ

ದೊಡ್ಡಪೇಟೆ ಠಾಣೆ ಪಿಎಸ್ಐ ವಸಂತ್ ಅವರ ನೇತೃತ್ವದಲ್ಲಿ ಅಸ್ಲಂ ಬಂಧನಕ್ಕೆ ತೆರಳಲಾಗಿತ್ತು. ಈ ಸಂದರ್ಭ ಅಸ್ಲಂ, ಪೊಲೀಸ್ ಸಿಬ್ಬಂದಿ ರಮೇಶ್ ಅವರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ರಮೇಶ್ ಅವರು ಗಾಯಗೊಂಡಿದ್ದಾರೆ. ದಾಳಿ ನಡೆಸಿ ಅಸ್ಲಂ ಪರಾರಿಯಾಗಲು ಯತ್ನಿಸಿದ್ದಾನೆ.

(police fired)

ಪೊಲೀಸರ ಪಿಸ್ತೂಲಿನಿಂದ ಗುಂಡು

ಪರಾರಿಯಾಗಲು ಯತ್ನಿಸಿದ ಅಸ್ಲಂಗೆ ಪಿಎಸ್ಐ ವಸಂತ್ ಅವರು ಎಚ್ಚರಿಕೆ ನೀಡಿದ್ದಾರೆ. ಬಳಿಕ ಗುಂಡು ಹಾರಿಸಿದ್ದಾರೆ. ಅಸ್ಲಂನ ಎಡಗಾಲಿಗೆ ಗುಂಡು ತಾಗಿದ್ದು, ಆತ ಗಾಯಗೊಂಡಿದ್ದಾನೆ. ಕೂಡಲೆ ಪೊಲೀಸ್ ಸಿಬ್ಬಂದಿ ರಮೇಶ್ ಮತ್ತು ಆರೋಪಿ ಅಸ್ಲಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ. ಪೊಲೀಸ್ ಸಿಬ್ಬಂದಿ ರಮೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಸ್ಲಂಗೆ ಅಪರಾಧ ಹಿನ್ನೆಲೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿವೆ.

ಅಸ್ಲಂ ಬಂಧನಕ್ಕೆ ಹೋಗಿದ್ದೇಕೆ?

ಆ.30ರಂದು ರಾತ್ರಿ ಬಿ.ಹೆಚ್.ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಅಶೋಕ್ ಪ್ರಭು ಎಂಬಾತನ ಜೊತೆಗೆ ನಾಲ್ವರು ಕ್ಷುಲಕ ವಿಚಾರಕ್ಕೆ ಜಗಳವಾಡಿದ್ದರು. ಹರಿತವಾದ ಆಯುಧದಿಂದ ಅಶೋಕ್ ಪ್ರಭು ಎಡಗಲ್ಲದ ಮೇಲೆ ಹಲ್ಲೆ ಮಾಡಿದ್ದರು. ಗಾಯಗೊಂಡಿದ್ದ ಅಶೋಕ್ ಪ್ರಭು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಚಂದ್ರು ಕೇಸ್, ವಿನಯ್ ಗುರೂಜಿಯ ವಿಚಾರಣೆ ಸಂಬಂಧ ಶಿವಮೊಗ್ಗದಲ್ಲಿ ಎಡಿಜಿಪಿ ಏನಂದರು?

ಪ್ರಕರಣ ಸಂಬಂಧ ಸಾಗರದ ಆಸೀಫ್ ಅಲಿಯಾಸ್ ಚೆಲ್ಲಿ (26) ಎಂಬಾತನ್ನು ಶುಕ್ರವಾರ ಬಂಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಅಸ್ಲಂ ಎಂಬಾತ ಪುರಲೆ ರಸ್ತೆಯಲ್ಲಿ ಬಡಾವಣೆಯಲ್ಲಿ ಅಡಗಿರುವ ಖಚಿತ ಮಾಹಿತಿ ಲಭ್ಯವಾಗಿತ್ತು.

Shimoga Nanjappa Hospital

 

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

breaking news graphics

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment