ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಅಕ್ಟೋಬರ್ 2019
ಹೆಲ್ಮೆಟ್ ಹಾಕದೆ ದ್ವಿಚಕ್ರ ವಾಹನ ಚಲಾಯಿಸುವವರೆ ಎಚ್ಚರ. ಇನ್ಮುಂದೆ ಶಿವಮೊಗ್ಗ ನಗರದಲ್ಲಿ ಎಲ್ಲೆಂದರಲ್ಲಿ ಚೆಕಿಂಗ್ ಮಾಡ್ತಾರೆ ಟ್ರಾಫಿಕ್ ಪೊಲೀಸ್.
ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಬೇಕು ಎಂದು ಜಾಗೃತಿ ಮೂಡಿಸಲು, ಶಿವಮೊಗ್ಗ ಪೊಲೀಸರು ಇವತ್ತು ಬೈಕ್ ಜಾಥಾ ಆಯೋಜಿಸಿದ್ದರು. ಡಿಎಆರ್ ಮೈದಾನದಿಂದ ಆರಂಭವಾಗಿ ಅಶೋಕ ಸರ್ಕಲ್, ಅಮೀರ್ ಅಹಮದ್ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್ ಸೇರಿದಂತೆ ವಿವಿಧೆಡೆ ಬೈಕ್ ಜಾಥಾ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಜಾಥಾಗೆ ಚಾಲನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಶಿವಮೊಗ್ಗದಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರನ್ನು ಹಿಡಿದು ದಂಡ ವಿಧಿಸಲಾಗುತ್ತದೆ. ಇವತ್ತಿನಿಂದ ಇದಕ್ಕಾಗಿಯೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ದಂಡ ವಿಧಿಸುವುದು ನಮ್ಮ ಗುರಿ ಅಲ್ಲ. ಬದಲಾಗಿ ದ್ವಿಚಕ್ರ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಈ ಪ್ರಯತ್ನ ಮಾಡಲಾಗುತ್ತದೆ ಎಂದರು.
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್, ಡಿವೈಎಸ್’ಪಿ ಉಮೇಶ್ ನಾಯ್ಕ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ADVERTISEMENT
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರೋಡ್ ಸರಿ ಮಾಡಿಸಿ ಆಮೇಲೆ ಹೆಲ್ಮೆಟ್ ಹಾಕದವರಿಗೆ ದಂಡ ಹಾಕೋಕೆ ಹೇಳಿ.