ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ (Protected). ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಘಟನೆಯಾಗಿದೆ.
ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಪೊಲೀಸರಿಗೆ ವಿಷಯ ತಿಳಿದಿದ್ದು 112 ಇಆರ್‌ಎಸ್‌ಎಸ್ ವಾಹನದ ಸಿಬ್ಬಂದಿ ಜಗದೀಶ್, ಚಾಲಕ ಮಂಜುನಾಥ್ ಕೂಡಲೆ ಮನೆಗೆ ದೌಡಾಯಿಸಿದರು. ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಮನವೊಲಿಸಿ ಜೀವ ರಕ್ಷಿಸಿದ್ದಾರೆ.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳಿಗೆ ನಿತ್ಯ ಎರಡು ಬಾರಿ ತಾಲೀಮು, ಇದಕ್ಕಿದೆ ಎರಡು ಕಾರಣ, ಏನದು?
ತುಂಗಾ ನಗರ ಠಾಣೆಯ ಸಿಬ್ಬಂದಿ ಪ್ರಭು ಮತ್ತು ಕಿರಣ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ವ್ಯಕ್ತಿಯ ಮನವೊಲಿಸುವ ಕಾರ್ಯ ನಡೆಸಿದರು. ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅಭಿನಂದಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಶಿಕ್ಷಕಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು ಮೋಸ?

Police Protected a man at alkola





