ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 ಮಾರ್ಚ್ 2022
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಮದ್ಯ ಮಾರಾಟ
ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು ಮದ್ಯ ಕುಡಿಯಲು ವ್ಯವಸ್ಥೆ ಮಾಡಿಕೊಟ್ಟಾತನನ್ನು ಬಂಧಿಸಿದ್ದಾರೆ. ಆತನಿಂದ 281 ರೂ. ಮೌಲ್ಯದ 8 ಪೌಚ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓಸಿ ಜೂಜಾಟ ಪ್ರಕರಣ
ಶಿವಮೊಗ್ಗ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದಾಗ ಗುರುಪುರ ಗ್ರಾಮದ ಮೊದಲ ಕ್ರಾಸ್ ಬಳಿ ಮೂವರು ಓ.ಸಿ. ಜೂಜಾಟ ಆಡುತ್ತಿರುವುದು ಗಮನಕ್ಕೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇವರಿಂದ 9820 ರೂ. ನಗದು, ಓ.ಸಿ. ಚೀಟಿ, ಎರಡು ಬೈಕ್ ಮತ್ತು ಮೂರು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾವತಿ | ಗಾಂಜಾ ಸೇವನೆ ಪ್ರಕರಣ
ಭದ್ರಾವತಿಯ ಜಟ್ ಪಟ್ ನಗರದ ಬಳಿ ವ್ಯಕ್ತಿಯೊಬ್ಬ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಗಾಂಜಾ ಸೇವನೆ ದೃಢವಾದ ಹಿನ್ನೆಲೆ, ಆತನನ್ನು ಬಂಧಿಸಲಾಗಿದೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ಮಾರಾಟ ಪ್ರಕರಣ
ಜಾವಳ್ಳಿ ಟ್ಯಾಂಕ್ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ಬಳಿ ಇದ್ದ 700 ರೂಪಾಯಿ ರೂಪಾಯಿ ಮೌಲ್ಯದ 20 ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೊಮ್ಮನಕಟ್ಟೆಯಲ್ಲಿ ದಾಳಿ
ಬೊಮ್ಮನಕಟ್ಟೆ 2ನೇ ಕ್ರಾಸ್ ನಲ್ಲಿ ವ್ಯಕ್ತಿಯೊಬ್ಬ ತನ್ನ ದಿನಸಿ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















