ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಪೊಲೀಸರ ದಾಳಿ

SHIVAMOGGA LIVE NEWS | 29 ಮಾರ್ಚ್ 2022

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ

ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು ಮದ್ಯ ಕುಡಿಯಲು ವ್ಯವಸ್ಥೆ ಮಾಡಿಕೊಟ್ಟಾತನನ್ನು ಬಂಧಿಸಿದ್ದಾರೆ. ಆತನಿಂದ 281 ರೂ. ಮೌಲ್ಯದ 8 ಪೌಚ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓಸಿ ಜೂಜಾಟ ಪ್ರಕರಣ

ಶಿವಮೊಗ್ಗ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದಾಗ ಗುರುಪುರ ಗ್ರಾಮದ ಮೊದಲ ಕ್ರಾಸ್ ಬಳಿ ಮೂವರು ಓ.ಸಿ. ಜೂಜಾಟ ಆಡುತ್ತಿರುವುದು ಗಮನಕ್ಕೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇವರಿಂದ 9820 ರೂ. ನಗದು, ಓ.ಸಿ. ಚೀಟಿ, ಎರಡು ಬೈಕ್ ಮತ್ತು ಮೂರು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾವತಿ | ಗಾಂಜಾ ಸೇವನೆ ಪ್ರಕರಣ

ಭದ್ರಾವತಿಯ ಜಟ್ ಪಟ್ ನಗರದ ಬಳಿ ವ್ಯಕ್ತಿಯೊಬ್ಬ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಗಾಂಜಾ ಸೇವನೆ ದೃಢವಾದ ಹಿನ್ನೆಲೆ, ಆತನನ್ನು ಬಂಧಿಸಲಾಗಿದೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ಜಾವಳ್ಳಿ ಟ್ಯಾಂಕ್ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ಬಳಿ ಇದ್ದ 700 ರೂಪಾಯಿ ರೂಪಾಯಿ ಮೌಲ್ಯದ 20 ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಮ್ಮನಕಟ್ಟೆಯಲ್ಲಿ ದಾಳಿ

ಬೊಮ್ಮನಕಟ್ಟೆ 2ನೇ ಕ್ರಾಸ್‍ ನಲ್ಲಿ ವ್ಯಕ್ತಿಯೊಬ್ಬ ತನ್ನ ದಿನಸಿ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

crime name image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment