ಶಿವಮೊಗ್ಗದಲ್ಲಿ ಗೋಮಾಂಸ ಮಾರಾಟ ಆರೋಪ, ಮನೆ ಮೇಲೆ ಪೊಲೀಸ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 OCTOBER 2023

SHIMOGA : ಗೋಮಾಂಸ (Beef) ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಒಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಬುದ್ಧನಗರದ ಮನೆಯೊಂದರಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಮನೆಯಲ್ಲಿದ್ದವರು ಪರಾರಿಯಾಗಿದ್ದಾರೆ. ದಾಳಿ ನಡೆಸಿದ ಪೊಲೀಸರಿಗೆ 18 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ಒಂದು ಮಚ್ಚು, ಎಲೆಕ್ಟ್ರಾನಿಕ್‌ ತೂಕದ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್‌ ಮಸೂದ್‌ ಎಂಬಾತನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ವಿವಿಧ ಠಾಣೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2023

Leave a Comment