SHIMOGA , 28 AUGUST 2024 : ಸೋಗಾನೆಯಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದ (Jail) ಮೇಲೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದರು. ಇದೇ ಮೊದಲ ಬಾರಿ ಬೆಳಗಿನ ಜಾವ ದಾಳಿ ನಡೆಸಲಾಗಿದೆ. ಪೊಲೀಸರು ಕಾರಾಗೃಹದ ಮೂಲೆ ಮೂಲೆಯನ್ನು ಶೋಧಿಸಿದರು.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ನೂರು ಪೊಲೀಸ್ ಸಿಬ್ಬಂದಿಯೊಂದಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಯಿತು. ವಿವಿಧೆಡೆ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಲಾಗಿದೆ.
» ಮೂಲೆ ಮೂಲೆಯಲ್ಲಿ ಶೋಧ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಆರೋಪ, ವಿಡಿಯೋ ಕಾಲ್‌ನಲ್ಲಿ ಮಾತನಾಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನ ಮೇಲೆ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಯಿತು. ಸುಮಾರು ನಾಲ್ಕು ಗಂಟೆಗು ಹೆಚ್ಚು ಹೊತ್ತು ಮೂಲೆ ಮೂಲೆ ಶೋಧ ಕಾರ್ಯ ನಡೆಸಲಾಯಿತು.
ಯಾರೆಲ್ಲ ದಾಳಿ ನಡೆಸಿದ್ದರು?
ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್‌ಪಿಗಳಾದ ಕೃಷ್ಣಮೂರ್ತಿ, ಇನ್ಸ್‌ಪೆಕ್ಟರ್‌ಗಳಾದ ರವಿ ಪಾಟೀಲ್, ದೀಪಕ್, ಸತ್ಯನಾರಾಯಣ, ಪ್ರಶಾಂತ್, ಇಬ್ಬರು ಪಿಎಸ್‌ಐಗಳು, 100 ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
700ಕ್ಕೂ ಹೆಚ್ಚು ಕೈದಿಗಳು
ಶಿವಮೊಗ್ಗದ ಕೇಂದ್ರ ಕಾರಾಗೃಹವು ಕೊರಿಯ ಮಾದರಿಯ ಜೈಲುಗಳಂತೆ ನಿರ್ಮಿಸಲಾಗಿದೆ. 270 ಕೊಠಡಿಗಳು ಇಲ್ಲಿವೆ. ಇವತ್ತಿಗೆ ಜೈಲಿನಲ್ಲಿ 778 ಕೈದಿಗಳು ಇದ್ದಾರೆ. ಪ್ರತಿ ಕೊಠಡಿಯಲ್ಲಿ ಟಿವಿ, ಸುಸಜ್ಜಿತ ಗಾಳಿ, ಬೆಳಕು ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಕೈಗಾರಿಕ ಭದ್ರತಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇದನ್ನೂ ಓದಿ ⇒ ಅರಣ್ಯ ಒತ್ತುವರಿ ತೆರವು ವಿಚಾರ, ಹರಿಪ್ರಸಾದ್ ಫೋನ್ ಕರೆ ಬೆನ್ನಿಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಮಿನಿಸ್ಟರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200