ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
FATAFAT NEWS : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ (raid) ನಡೆಸಿದರೆಂತೆ ಶಿವಮೊಗ್ಗ ಸಿಟಿಯ ಮೂರು ಸುದ್ದಿಗಳು ಫಟಾಫಟ್ ಓದಿಗಾಗಿ.
ಸೋಗಾನೆ ಕೇಂದ್ರ ಕಾರಾಗೃಹದ ಮೇಲೆ ದಾಳಿ ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ 50 ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದೆ. ಪುರುಷರು ಮತ್ತು ಮಹಿಳಾ ಬ್ಯಾರಕ್ಗಳಲ್ಲಿ ಪರಿಶೀಲನೆ ನಡೆಸಲಾಯಿತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಡಿವೈಎಸ್ಪಿ ಬಾಬು ಆಂಜನಪ್ಪ, ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ, ಇನ್ಸ್ಪೆಕ್ಟರ್ಗಳಾದ ಸಿದ್ದೇಗೌಡ, ಭರತ್, ಅಶ್ವಥ ಗೌಡ, ಹರೀಶ್ ಕೆ.ಪಾಟೀಲ್, ಚಂದ್ರಕಲಾ, 10 ಮಂದಿ ಪಿಎಸ್ಐಗಳು, 50 ಸಿಬ್ಬಂದಿ ದಾಳಿ ನೆಡಸಿ ಪರಿಶೀಲನೆ ನಡೆಸಿದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುವೆಂಪು ರಂಗಮಂದಿರ ವಚನಕಾರ ಹಡಪದ ಅಪ್ಪಣ್ಣ ಜಯಂತಿ ಶಿವಮೊಗ್ಗ ಲೈವ್.ಕಾಂ : ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿ ಸಲಾಯಿತು. ಶಿವಮೊಗ್ಗ, ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದಲ್ಲಿನ ಶೋಷಿತ ವರ್ಗಗಳ ಬೆಳವಣಿಗೆಗೆ ವಚನಗಳ ಮೂಲಕ ಶಿವಶರಣರು ಕ್ರಾಂತಿಕಾರಿ ಹೋರಾಟ ನಡೆಸಿದರು. ವಚನಕಾರ ಹಡಪದ ಅಪ್ಪಣ್ಣ 12ನೇ ಶತಮಾನದಲ್ಲಿ ಅನುಭವ ಮಂಟಪದ ಕಾರ್ಯದರ್ಶಿಯಾಗಿದ್ದರು ಎಂದರು. ತಹಶೀಲ್ದಾರ್ ಗಿರೀಶ್, ಶಾಸಕಿ ಶಾರದಾ ಪೂರ್ಯಾನಾಯ್ಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ಚಕ್ರ, ಸಾವೇಹಕ್ಲು ಸಂತ್ರಸ್ಥರ ಹೋರಾಟ | ಕೂಡಲಿಯಲ್ಲಿ ಚಾತುರ್ಮಾಸ್ಯ – 3 ಫಟಾಫಟ್ ಸುದ್ದಿ
ಶಿವಮೊಗ್ಗ ಬಂಜಾರ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಶಿವಮೊಗ್ಗ ಲೈವ್.ಕಾಂ : ಜಿಲ್ಲಾ ಬಂಜಾರ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು. ಸಂಸದ ಬಿ.ವೈ.ರಾಘವೇಂದ್ರ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಸೂಡ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ ಭಾಗವಹಿಸಿದ್ದರು. ಸರಿಗಮಪ ಖ್ಯಾತಿಯ ರಮೇಶ್ ಲಂಬಾಣಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.