ಶಿವಮೊಗ್ಗ ಜಿಲ್ಲೆಯ 7 ಶಾಲಾ ವಾಹನ ಚಾಲಕರ ಡ್ರೈವಿಂಗ್‌ ಲೈಸೆನ್ಸ್‌ ರದ್ಧತಿಗೆ ಪೊಲೀಸರ ರಿಪೋರ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ (DL) ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಕ್ಕಳನ್ನು ಕರೆದೊಯ್ಯುವ ಒಟ್ಟು 457 ಶಾಲಾ ವಾಹನಗಳನ್ನು ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್‌ ತಪಾಸಣೆ ನಡೆಸಲಾಯಿತು. ಈ ವೇಳೆ 7 ಚಾಲಕರು ಮದ್ಯ ಸೇವಿಸಿ ವಿದ್ಯಾರ್ಥಿಗಳಿದ್ದ ವಾಹನವನ್ನು ಚಾಲನೆ ಮಾಡುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಅವರ ವಿರುದ್ಧ ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣ ದಾಖಲಿಸಲಾಗಿದೆ.

Traffic-Police-Check-School-bus-drivers-in-Shimoga-city

ತಪಾಸಣೆ ಸಂದರ್ಭ ಪೊಲೀಸರು ಶಾಲಾ-ಕಾಲೇಜು ವಾಹನಗಳ ಸುಸ್ಥಿತಿಯನ್ನು ಪರಿಶೀಲನೆ ನಡೆಸಿದ್ದಾರೆ. ವಾಹನಗಳಿಗೆ ಸಂಬಂಧಿಸಿದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್‌ಗಳನ್ನು ನಿಯಮಾನುಸಾರ ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಚಾಲಕರಿಗೆ ಮತ್ತು ಶಾಲಾ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಲಾಗಿದೆ.