| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಹೇಗಿದೆ ಭದ್ರತಾ ವ್ಯವಸ್ಥೆ?
ಮೆರವಣಿಗೆ ಹಿನ್ನಲೆ 5 ಎಸ್‌ಪಿ, 2 ಎಎಸ್‌ಪಿ, 21 ಡಿವೈಎಸ್‌ಪಿ, 58 ಇನ್ಸ್‌ಪೆಕ್ಟರ್, 65 ಪಿಎಸ್‌ಐ, 198 ಪ್ರೊಬೆಷನರಿ ಪಿಎಸ್‌ಐ, 114 ಎಎಸ್‌ಐ, 2259 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳು, 692 ಹೋಮ್ ಗಾರ್ಡ್ಸ್ ಸೇರಿದಂತೆ ಕೆಎಸ್‌ಆರ್‌ಪಿ, ಎಸ್‌ಎಎಫ್, ಆರ್‌ಎಎಫ್ ಸೇರಿದಂತೆ 5 ಸಾವಿರ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ.
![]()
ನಗರದ ವಿವಿಧೆಡೆ ರೂಟ್ ಮಾರ್ಚ್
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಬಂದೋಬಸ್ತ್‌ಗೆ ನಿಯೋಜನೆಗೊಂಡಿರುವ ಪೊಲೀಸರಿಗೆ ಇವತ್ತು ಬ್ರೀಫಿಂಗ್ ನಡೆಸಲಾಯಿತು. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಪ್ರಮುಖ ಸೂಚನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ ಘೋಷಣೆ
ಬ್ರೀಫಿಂಗ್ ಬಳಿಕ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಕೆಎಸ್‌ಆರ್‌ಪಿ, ಡಿಎಆರ್, ಎಸ್‌ಎಎಫ್, ಆರ್‌ಎಎಫ್ ಸಿಬ್ಬಂದಿ ರೂಟ್ ಮಾರ್ಚ್ ನಡೆಸಿದರು. ಪ್ರಮುಖ ರಸ್ತೆಗಳು, ಸೂಕ್ಷ್ಮ ಪ್ರದೇಶಗಳು, ಗಣಪತಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.





police route march
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()