ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ಡಿಸೆಂಬರ್ 2019
ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಡಿ.28ರಂದು ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಟಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಂದೋಬಸ್ತ್ ಹಿನ್ನೆಲೆ ಇವತ್ತು ಡಿಎಆರ್ ಮೈದಾನದಲ್ಲಿ ರೋಲ್ ಕಾಲ್ ನಡೆಯಿತು. ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸರಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ರೋಲ್ ಕಾಲ್ ಮತ್ತು ಬಂದೋಬಸ್ತ್ ಕುರಿತು ಸಲಹೆಗಳನ್ನು ನೀಡಲಾಯಿತು. ಬಳಿಕ ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422