ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆಯಲ್ಲೂ ಕಲ್ಲಗಂಗೂರು ಕಲ್ಲು ಗಣಿ ಸ್ಫೋಟ ಪ್ರಕರಣ ಪ್ರತಿಧ್ವನಿಸಿತು. ಈ ಸಮುದಾಯಕ್ಕೆ ಸೇರಿದ ಹಲವರು ಮನೆ ಕಳೆದುಕೊಳ್ಳುವ ಆತಂವಿದ್ದು, ಪರಿಹಾರ ನೀಡುವ ಕುರಿತು ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಸಭೆಯಲ್ಲಿ ಬೇಸರ ವ್ಯಕ್ತಪಡಿಸಿಲಾಯಿತು.
ಡಿಎಆರ್ ಸಭಾಂಗಣದಲ್ಲಿ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸೋಮಶೇಖರ್ ಎಂಬುವವರು, ಸ್ಫೋಟದಿಂದಾಗಿ ಹುಣಸೋಡು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಹಲವರು ಮನೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಯಾರಿಗೂ ಈತನಕ ಪರಿಹಾರ ಸಿಕ್ಕಿಲ್ಲ ಎಂದರು.
ಕಲ್ಲಗಂಗೂರಿನ ತಿಮ್ಮರಾಜು ಎಂಬುವವರು ಮಾತನಾಡಿ, ಅಕ್ರಮ ಕಲ್ಲು ಕ್ವಾರಿಗಳ ಮೇಲಕೆ ದಾಳಿ ನಡೆಸುತ್ತಿರುವ ಪೊಲೀಸರು, ಬಡ ಕಾರ್ಮಿಕರ ಮೇಲೆ ಕೇಸು ಹಾಕುತ್ತಿದ್ದಾರೆ ಎಂದು ದೂರಿದರು.
ಸಮಸ್ಯೆ ಆಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸ್ಪೋಟ ಪ್ರಕರಣ ಸದ್ಯ ತನಿಖೆ ಹಂತದಲ್ಲಿದೆ. ಈ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಂದು ಕೊರತೆ ಸಭೆಗಳನ್ನು ಆಯೋಜಿಸಬೇಕು ಸೇರಿದಂತೆ ಹಲವು ಸಲಹೆಗಳು, ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡವರು ತಿಳಿಸಿದರು.
ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422