ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಕರ್ಫ್ಯೂ ಹಿನ್ನೆಲೆ ಅನಗತ್ಯ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ವಿಭಾಗವಾರು ಚೆಕ್ಪೋಸ್ಟ್ ಹಾಕಲಾಗಿತ್ತು. ಎಲ್ಲಾ ರಸ್ತೆಯಲ್ಲಿ ಬರುವ ವಾಹನಗಳ ತಪಾಸಣೆ ನಡೆಸಲಾಯಿತು.

ಜಿಲ್ಲಾ ರಕ್ಷಣಾಧಿಕಾರಿ ಸಿಟಿ ರೌಂಡ್ಸ್
ಕರ್ಫ್ಯೂ ಪರಿಸ್ಥಿತಿ ಪರಿಶೀಲನೆಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಸಿಟಿ ರೌಂಡ್ಸ್ ನಡೆಸಿದರು. ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ರಸ್ತೆ ಸೇರಿದಂತೆ ವಿವಿಧೆಡೆ ಜಿಲ್ಲಾ ರಕ್ಷಣಾಧಿಕಾರಿ ಪರಿಶೀಲಿಸಿದರು.
ವಾಹನ ಸೀಜ್ ಮಾಡಿಸಿದ ಎಎಸ್ಪಿ
ಮತ್ತೊಂದೆಡೆ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರು ವಿವಿಧೆಡೆ ಪರಿಶೀಲನೆ ನಡೆಸಿದರು. ಪ್ರತಿ ಚೆಕ್ಪೋಸ್ಟ್ಗೂ ತೆರಳಿ, ವಾಹನಗಳ ತಪಾಸಣೆ ನಡೆಸಿದರು. ಅನಗತ್ಯವಾಗಿ ಓಡಾಡುತ್ತಿದ್ದವರನ್ನು ತಡೆದು ಪ್ರಶ್ನಿಸಿ, ವಾಹನಗಳನ್ನು ವಶಕ್ಕ ಪಡೆಯುವಂತೆ ಪೊಲೀಸರಿಗೆ ಸೂಚಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ನಗರದಾದ್ಯಂತ ಬ್ಯಾರಿಕೇಡ್ಗಳನ್ನು ಹಾಕಿದ್ದ ಪೊಲೀಸರು, ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನ ತಡೆದು ಪರಿಶೀಲಿಸಿದರು. ಆರೋಗ್ಯದ ಕಾರಣ, ಆಸ್ಪತ್ರೆಗೆ ತೆರಳುವವರು, ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು, ತುರ್ತು ಮತ್ತು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






