ಶಿವಮೊಗ್ಗ: ನಗರದಾದ್ಯಂತ ಪೊಲೀಸ್ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ನಗರದ ವಿವಿಧೆಡೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಂಶಯಾಸ್ಪದ ವಸ್ತುಗಳ ಸಾಗಾಟವನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯು ನಿಗಾ ವಹಿಸಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
