ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 28 DECEMBER 2023
SHIMOGA : ಫ್ರೀಡಂ ಪಾರ್ಕ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಮುಖ ಆರೋಪಿ, ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಓಲಂಗನ ಮೇಲೆ ಫೈರಿಂಗ್ ಮಾಡಲಾಗಿದೆ. ಶಿವಮೊಗ್ಗ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ಮೂರು ದಿನದ ಹಿಂದೆ ಫ್ರೀಡಂ ಪಾರ್ಕ್‌ನಲ್ಲಿ ಶಶಿಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಓಲಂಗ ತಲೆಮರೆಸಿಕೊಂಡಿದ್ದ. ಬುಧವಾರ ಆತನನ್ನು ಬಂಧಿಸಲಾಗಿತ್ತು. ಮಾರಕಾಸ್ತ್ರವನ್ನು ಬಚ್ಚಿಟ್ಟಿದ್ದ ಸ್ಥಳಕ್ಕೆ ಕರೆದೊಯ್ದಾಗ ಡ್ರ್ಯಾಗರ್‌ನಿಂದ ಪೊಲಿಸರ ಮೇಲೆ ಮಂಜು ಅಲಿಯಾಸ್ ಓಲಂಗ ದಾಳಿ ನಡೆಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಜಯನಗರ ಠಾಣೆ ಇನ್ಸ್‌ಪೆಕ್ಟರ್ ಸಿದ್ದೇಗೌಡ ಆತ್ಮರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ರೌಡಿ ಶೀಟರ್ ಮಂಜು ದಾಳಿ ಮುಂದುವರೆಸಿದ ಹಿನ್ನೆಲೆ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಓಲಂಗನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಪೊಲೀಸರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ – ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಕವರ್‌ನಲ್ಲಿ ಚಿನ್ನದ ನಾಣ್ಯ ಮಾರಾಟ, ಕೊಡಗಿನಿಂದ ಬಂದ ಯುವಕ, ಮುಂದೇನಾಯ್ತು?






