ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 FEBRUARY 2024
SHIMOGA : ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳು ಮತ್ತು ಹಾಫ್ ಹೆಲ್ಮೆಟ್‌ಗಳ ಮೇಲೆ ಸಂಚಾರ ಠಾಣೆ ಪೊಲೀಸರು ರೋಡ್ ರೋಲರ್ ಹರಿಸಿ ನಾಶ ಪಡಿಸಿದರು. ಸಾರ್ವಜನಿಕರಿಗೆ ಇವುಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆ ಗೋಪಿ ಸರ್ಕಲ್‌ನಲ್ಲಿ ರೋಡ್ ರೋಲರ್ ಹತ್ತಿಸಿ ನಾಶಪಡಿಸಲಾಯಿತು.
ಇದನ್ನೂ ಓದಿ – ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್ ಬಿಡಲಾಗುತ್ತೆ?
ಸುಮಾರು 3 ಸಾವಿರ ಹಾಫ್ ಹೆಲ್ಮೆಟ್‌ಗಳು, 70 ಸೈಲೆನ್ಸರ್‌ಗಳನ್ನು ಸಂಚಾರ ಪೊಲೀಸರು ನಾಶಪಡಿಸಿದ್ದಾರೆ. ಸರ್ಕಲ್‌ನಲ್ಲಿ ಎಲ್ಲವನ್ನು ಸಾಲಾಗಿ ಜೋಡಿಸಿ ಅವುಗಳ ಮೇಲೆ ರೋಡ್ ರೋಲರ್ ಹತ್ತಿಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಸೇರಿದಂತೆ ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆಯ ಸಿಬ್ಬಂದಿ ಇದ್ದರು. ಕಾರ್ಯಾಚರಣೆಯನ್ನು ವೀಕ್ಷಿಸಲು ಗೋಪಿ ಸರ್ಕಲ್‌ನಲ್ಲಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು.
ಕಾರ್ಯಾಚರಣೆ ಇದೆ ಮೊದಲಲ್ಲ
ಹಾಫ್ ಹೆಲ್ಮೆಟ್‌ಗಳ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿರುವುದು ಇದೆ ಮೊದಲಲ್ಲ. ಕೆಲವು ತಿಂಗಳ ಹಿಂದೆ ಸಾವಿರಾರು ಹಾಫ್ ಹೆಲ್ಮೆಟ್‌ಗಳನ್ನು ದ್ವಿಚಕ್ರ ವಾಹನ ಸವಾರರಿಂದ ವಶಕ್ಕೆ ಪಡೆದು ನಾಶ ಪಡಿಸಿದ್ದರು. ಇನ್ನು ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಡಿಗಳ ಮೇಲು ದಾಳಿ ನಡೆಸಿದ್ದರು. ಹಾಫ್ ಹೆಲ್ಮೆಟ್‌ನಿಂದ ವಾಹನ ಸವಾರರಿಗೆ ರಕ್ಷಣೆ ಸಿಗುವುದಿಲ್ಲ. ಐಎಸ್‌ಐ ಗುರುತಿನ ಹೆಲ್ಮೆಟ್ ಧರಿಸುವಂತೆ ಪೊಲೀಸರು ಜಾಗೃತಿ ಮೂಡಿಸಿದ್ದರು. ಇನ್ನು, ಬೈಕುಗಳಿಗೆ ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ಅಳವಡಿಸಿ ತಿರುಗಾಡುತ್ತಿದ್ದವರಿಗು ಪೊಲೀಸರು ಬಿಸಿ ಮುಟ್ಟಿಸಿದ್ದರು. ಈ ಪುನಃ ಕಾರ್ಯಾಚರಣೆ ನಡೆಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422