SHIVAMOGGA LIVE NEWS | SHIMOGA | 19 ಏಪ್ರಿಲ್ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿವಮೊಗ್ಗ ಪ್ರವಾಸದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರ ಚಲನವಲನ ಗಮನಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳಗ್ಗೆಯಿಂದ ಮುಖಂಡರ ಮನೆಗಳ ಮುಂದೆ ಪೊಲೀಸರು ಠಿಕಾಣಿ ಹೂಡಿದ್ದಾರೆ.
ಯುವ ಕಾಂಗ್ರೆಸ್, NSUI ಸೇರಿದಂತೆ ಯುವ ಮುಖಂಡರಿಗೆ ಇವತ್ತು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದ ಪೊಲೀಸರು, ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ನೀವು ಇಂದು ಮನೆಯಲ್ಲೇ ಇರಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮ ಮುಗಿಯುವವರೆಗೂ ಮನೆಯಿಂದ ಹೊರಬರುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಪೊಲೀಸರು ಮುಖಂಡರ ಮನೆ ಮುಂದೆ ಕುರ್ಚಿ ಹಾಕಿಸಿಕೊಂಡು ಬಾಗಿಲು ಕಾಯುತ್ತಿದ್ದ ದೃಶ್ಯವು ಕಂಡುಬಂದವು.
ವಿಡಿಯೋ ಬಿಡುಗಡೆ
ಯುವ ಮುಖಂಡರ ಮನೆಗಳ ಮುಂದೆ ಪೊಲೀಸರನ್ನು ನಿಯೋಜನೆ ಮಾಡಿರುವ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್ ಅವರ ಮನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಅವರ ಚಲನವಲನದ ಕುರಿತು ನಿಗಾ ವಹಿಸಲಾಗಿತ್ತು. ಇದರ ವಿಡಿಯೋವನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ.
ನಿಗಾ ವಹಿಸಲು ಕಾರಣವೇನು?
ಗುತ್ತಿಗೆದಾರ ಸಂತೋಷ್ ಪಾಟೀಲ್ ಅತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರಮುಖ ಆರೋಪಿಯಾಗಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿದ್ದರು. ಕಳೆದ ವಾರ ಈ ಘಟನೆಯಿಂದಾಗಿ ಬಿಜೆಪಿ ಕಚೇರಿ ಮುಂಭಾಗ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈಗ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಪಟ್ಟು ಹಿಡಿದಿದ್ದಾರೆ. ರಾಜ್ಯಾದ್ಯಂತ ಸಚಿವರು, ಸಂಸದರಿಗೆ ಕಪ್ಪು ಬಾವುಟ ಪ್ರದರ್ಶನ, ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನಗಳು ನಡೆದಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಯುವ ಕಾಂಗ್ರೆಸ್ ಅಥವಾ NSUI ಮುಖಂಡರು ಮುಖ್ಯಮಂತ್ರಿ ಅವರ ಕಾರಿಗೆ ಮುತ್ತಿಗೆ ಹಾಕುವ ಸಂಭವದ ಹಿನ್ನೆಲೆ ಅವರ ಚಲನವಲನದ ಮೇಲೆ ನಿಗಾ ವಹಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200