ಸಂಸದ ರಾಘವೇಂದ್ರ ಅಭಿಮಾನಿಗಳಿಂದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿವಮೊಗ್ಗ ಲೈವ್‌.ಕಾಂ | ಶಿವಮೊಗ್ಗ

ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Special-Pooja-at-Ravindra-Nagara-Ganapathi-temple-for-B-Y-Raghavendra

ರಾಘವೇಂದ್ರ ಅವರ ಭಾವಚಿತ್ರ ಹಿಡಿದು, ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಇದೇ ವೇಳೆ ಸಂಸದ ರಾಘವೇಂದ್ರ ಪರವಾಗಿ ಘೋಷಣೆ ಕೂಗಿ, ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.

ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಜಗದೀಶ್‌, ಪ್ರಮುಖರಾದ ಎಸ್‌.ದತ್ತಾತ್ರಿ, ಬಳ್ಳೇಕೆರೆ ಸಂತೋಷ್‌, ಐಡಿಯಲ್‌ ಗೋಪಿ, ಕಿರಣ್‌ ಕುಮಾರ್‌, ಮಂಜುನಾಥ್‌, ಅಣ್ಣಪ್ಪ, ಸುರೇಖಾ ಮುರಳೀಧರ್‌ ಸೇರಿದಂತೆ ಹಲವರು ಇದ್ದರು.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ