ಶಿವಮೊಗ್ಗದಲ್ಲಿ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ಅಸಹಕಾರ ಚಳವಳಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ (AIGDSU) ಶಿವಮೊಗ್ಗ ವಿಭಾಗದ ವತಿಯಿಂದ ಜೂನ್ 23ರಿಂದ ದೇಶವ್ಯಾಪಿ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ಅಂಚೆ ಕಚೇರಿ ಮುಂಭಾಗ ಧರಣಿ ನಡೆಸಿದ ಅಂಚೆ ನೌಕರರು, ತಮಿಳುನಾಡಿನ ಕೃಷ್ಣಗಿರಿಯಲ್ಲಿ ಇತ್ತೀಚೆಗೆ ನಡೆದ ಸಂಘದ 13ನೇ ಅಖಿಲ ಭಾರತ ಸಮ್ಮೇಳನದಲ್ಲಿ ವಿವಿಧ ಬೇಡಿಕೆ ಈಡೇರಿಸುವವರೆಗೆ ಧರಣಿ ನಡೆಸುವಂತೆ ನಿರ್ಧರಿಸಲಾಗಿದೆ. ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಜೂನ್ 23ರಂದು ವಿಭಾಗೀಯ ಮತ್ತು ಶಾಖಾ ಮಟ್ಟದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುತ್ತಿದೆ.

Postal-Department-Employees-Protest-in-Shimoga.

ಜುಲೈ 14ರಂದು ಎಲ್ಲಾ ರಾಜ್ಯಗಳ ವಲಯ ಕಚೇರಿಗಳ ಮುಂದೆ ಭಾರಿ ಪ್ರತಿಭಟನೆ ಹಾಗೂ ಆಗಸ್ಟ್‌ನಲ್ಲಿ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!